ನ್ಯೂಸ್ ನಾಟೌಟ್: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಗುರುವಾರ ಮಧ್ಯಾಹ್ನ ಬೈಕ್‌ನಲ್ಲಿ ಬಂದ ಅಪರಿಚಿತನೋರ್ವ ಚಿನ್ನದ ಸರ ಕದ್ದು ಪರಾರಿಯಾದ ಘಟನೆ ಮಂಗಳೂರು ನಗರದ ಬೋಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಬೋಳೂರು ಮಠದ ಕಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈಹಾಕಿ 40 ಗ್ರಾಂ. ಚಿನ್ನದ ಸರ ಎಗರಿಸಿದ ಖದೀಮ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ಮಹಿಳೆ ಆಸ್ಪತ್ರೆಗೆ ಹೋಗಿ ಮನೆಗೆ ವಾಪಾಸು ಬರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಬರ್ಕೆ ಠಾಣಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.