ಕರಾವಳಿಕ್ರೈಂವೈರಲ್ ನ್ಯೂಸ್

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಕಾವಿ ತೆಗೆದು ಟೀ ಶರ್ಟ್ ಧರಿಸಿ ಒಡಿಶಾ ರೈಲಿನಲ್ಲಿದ್ದ ಹಾಲಶ್ರೀ ಪೊಲೀಸ್ ಬಲೆಗೆ! ಇಲ್ಲಿದೆ ಪೊಲೀಸರ ರೋಚಕ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ

309

ನ್ಯೂಸ್ ನಾಟೌಟ್ : ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿ ಹಾಲಶ್ರೀಯವರನ್ನು ಇಂದು(ಸೆ.19) ಬಂಧಿಸಲಾಗಿದೆ.

ಒಡಿಶಾದ ಕಟಕ್ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀ ಅರೆಸ್ಟ್ ಆಗಿದ್ದು ಇಂದು ರಾತ್ರಿ ಕಟಕ್​ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಇತ್ತೀಚೆಗೆ ಚೈತ್ರಾ ಕುಂದಾಪುರ ಬಂಧನದ ಬಳಿಕ ಇದೀಗ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ 3ನೇ ಆರೋಪಿ ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿತ್ತು.

ಅಭಿನವ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ​ ಅರ್ಜಿ ಸಲ್ಲಿಸಿದ್ದರು.ಇದಕ್ಕೆ ಸಂಬಂಧಿಸಿದಂತೆ ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿತ್ತು.

ಬೆಂಗಳೂರಿನ ಗೋವಿಂದರಾಜನಗರದ ಶ್ರೀಮದ್ ವಿಭೂತಿಪುರ ಒಡೆತನದ ನಿವಾಸದಲ್ಲಿ ವಾಸವಿದ್ದ ಅಭಿನವ ಹಾಲಶ್ರೀ ಒಂದೂವರೆ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಸದ್ಯ 3-4 ತಿಂಗಳ ಹಿಂದೆ ಮನೆ ಖಾಲಿ ಮಾಡಿ ತಲೆಮರೆಸಿಕೊಂಡಿದ್ದಾರೆ. ಇಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿತ್ತು, ಈ ಬಗ್ಗೆ ತನಿಖೆಗಳಾಗುತ್ತಿದೆ.ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದರು.

ಈಗ ಸ್ವಾಮೀಜಿ ಟಿ ಶರ್ಟ್ ಧರಿಸಿ ಒಡಿಶಾದ ಕಟಕ್ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿದೆ.
MLA ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ತನ್ನ ಹೆಸರನ್ನು ದುರುಪಯೋಗ ಮಾಡಲಾಗಿದೆ.

ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು ನೀಡಿದ್ದರು.ಉದ್ಯಮಿ ಗೋವಿಂದಬಾಬು ಪೂಜಾರಿ, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿ ಜಿಲ್ಲೆ ಬೈಂದೂರಿನ ಹರ್ಷಾನಾಯ್ಕ್ ಹಳ್ಳಿಹೊಳೆ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ. 11ರಂದು ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು.

See also  ಸರ್ಕಾರಿ ಶಾಲೆಯ ಸಮೀಪ ಕಟ್ಟಿಹಾಕಿದ್ದ3 ಹಸುಗಳು ನಾಪತ್ತೆ..! ಹೆಲ್ಮೆಟ್‌ ಧರಿಸಿ ಹಸುಗಳನ್ನು ಕದ್ದಿದ್ದವನ ಬಂಧನ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget