ಕರಾವಳಿಕ್ರೈಂಬೆಂಗಳೂರು

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತಂದ ಸಿಸಿಬಿ ಪೊಲೀಸರು, ಕಟಕ್ ನಲ್ಲಿ ಟೀ ಶರ್ಟ್ ಹಾಕಿ ಓಡಾಡುತ್ತಿದ್ದ ಸ್ವಾಮೀಜಿಗೆ ಇನ್ಮುಂದೆ ಪೊಲೀಸ್ ಡ್ರಿಲ್..!

ನ್ಯೂಸ್ ನಾಟೌಟ್: ಚೈತ್ರಾ ಕುಂದಾಪುರ ವಂಚನೆ ಪ್ರಕರಣ ದಿನಕ್ಕೊಂದು ರೀತಿಯ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಒಡಿಶಾದಲ್ಲಿ ಅಭಿನವ ಹಾಲಶ್ರೀಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಾಲಾಶ್ರೀಯನ್ನು ಕರೆದುಕೊಂಡು ಬರಲಾಗಿದೆ.

ಇತ್ತೀಚೆಗೆ ಚೈತ್ರಾ ಕುಂದಾಪುರ ಬಂಧನದ ಬಳಿಕ ಇದೀಗ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ 3ನೇ ಆರೋಪಿ ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿತ್ತು. ಅಭಿನವ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ​ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಸಂಬಂಧಿಸಿದಂತೆ ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿತ್ತು.

ಬೆಂಗಳೂರಿನ ಗೋವಿಂದರಾಜನಗರದ ಶ್ರೀಮದ್ ವಿಭೂತಿಪುರ ಒಡೆತನದ ನಿವಾಸದಲ್ಲಿ ವಾಸವಿದ್ದ ಅಭಿನವ ಹಾಲಶ್ರೀ ಒಂದೂವರೆ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಸದ್ಯ 3-4 ತಿಂಗಳ ಹಿಂದೆ ಮನೆ ಖಾಲಿ ಮಾಡಿ ತಲೆಮರೆಸಿಕೊಂಡಿದ್ದಾರೆ. ಇಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿತ್ತು, ಈ ಬಗ್ಗೆ ತನಿಖೆಗಳಾಗುತ್ತಿದೆ. ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದರು.

ಈಗ ಸ್ವಾಮೀಜಿ ಟಿ ಶರ್ಟ್ ಧರಿಸಿ ಒಡಿಶಾದ ಕಟಕ್ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿದೆ.

Related posts

ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಚಿಂತಾಜನಕ ಸ್ಥಿತಿಯಲ್ಲಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತ್ಯು

ಕಾರ್ಕಳ: ವಿ ಸುನಿಲ್ ಕುಮಾರ್ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ

ಶೇ.1ರಷ್ಟು ಮುಸ್ಲಿಮರು ದೆಹಲಿಗೆ ದಾಳಿ ನಡೆಸಿದರೆ, ಮೋದಿ ಸೀಟು ಬಿಟ್ಟು ಪಲಾಯನ ಮಾಡಬೇಕು ಎಂದ ಮೌಲಾನಾ..! ಮುಸ್ಲಿಂ ಮುಖಂಡನ ಪ್ರಚೋದನಕಾರಿ ಹೇಳಿಕೆ..!