ಕರಾವಳಿಕ್ರೈಂವೈರಲ್ ನ್ಯೂಸ್

ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಎಫ್‌ಐಆರ್‌! ಉಡುಪಿಯಲ್ಲಿ ಮತ್ತೊಂದು ವಂಚನೆ ಪ್ರಕರಣ ಬಯಲು..! ಏನಿದು ಹೊಸಾ ಕೇಸ್?

328

ನ್ಯೂಸ್ ನಾಟೌಟ್ : ಬಟ್ಟೆ ಅಂಗಡಿಯನ್ನು ತೆರೆಯಲು ಅನುಮತಿ ಕೊಡಿಸುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಮತ್ತೊಂದು ಆರೋಪ ಚೈತ್ರಾ ಕುಂದಾಪುರ ಮೇಲೆ ಬಂದಿದ್ದು, ಉಡುಪಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಈ ಸಂಬಂಧ ಉಡುಪಿಯಲ್ಲಿ ಸಂತ್ರಸ್ತರು ದೂರು ನೀಡಿದ್ದು, ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆಯ ಭರವಸೆ ನೀಡಿದ್ದಾರೆ. ಈಗಾಗಲೇ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾ ಕುಂದಾಪುರ ಬಂಧನಕ್ಕೊಳಗಾಗಿದ್ದಾರೆ.

ಈ ಬೆನ್ನೆಲ್ಲೆ ಮತ್ತೊಂದು ವಂಚನೆ ಆರೋಪ ಕೇಳಿಬಂದಿದ್ದು, ಈ ಹಿಂದೆ ಉಡುಪಿಯಲ್ಲಿ ವ್ಯಕ್ತಿಯೊಬ್ಬರಿಗೆ ಬಟ್ಟೆ ಅಂಗಡಿ ತೆರೆಯಲು ಅಗತ್ಯ ಅನುಮತಿ, ವ್ಯವಸ್ಥೆ ಮಾಡಿಕೊಡುವುದಾಗಿ ನಂಬಿಸಿ ಐದು ಲಕ್ಷ ಹಣ ಪಡೆದು ಆ ನಂತರ ಬೆದರಿಸಿ ಹಣ ನೀಡದೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಕಾರ್ಯಕರ್ತ ಸುಧೀನ್ ಎಂಬುವರು ವಂಚನೆಗೊಳಗಾದ ವ್ಯಕ್ತಿ ಎನ್ನಲಾಗಿದ್ದು. 2015ರಲ್ಲಿ ಸುಧೀನ್ ಎಂಬವರಿಗೆ ಚೈತ್ರಾ ಕುಂದಾಪುರ ಪರಿಚಯವಾಗಿದ್ದರು. ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದೆ ಎಂದು ನಂಬಿಸಿದ್ದ ಚೈತ್ರಾ, 2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದ್ದಾಳೆ. ಮೂರು ಲಕ್ಷವನ್ನ ಚೈತ್ರಾ ಖಾತೆಗೆ ವರ್ಗಾಯಿಸಿದ್ದ ಸುದೀನ, ಉಳಿದ ಎರಡು ಲಕ್ಷ ಹಣವನ್ನ ನಗದು ರೂಪದಲ್ಲಿ ನೀಡಿದ್ದರು ಎನ್ನಲಾಗಿದೆ.

ಸುಧೀನ್‌ ಕೇಳಿದ ಸಂದರ್ಭದಲ್ಲಿ ಕೊನೆಗೆ ಹಂತದಲ್ಲಿದೆ ಎಂದು ಸುಳ್ಳು ಹೇಳುತ್ತಿದ್ದ ಚೈತ್ರಾ, ಚುನಾವಣಾ ಪ್ರಚಾರ, ಭಾಷಣ, ಕಾರ್ಯಕಾರಣಿ ಸಭೆ, ಪಕ್ಷದ ಮುಖಂಡರ ಭೇಟಿ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಅನುಮಾನಗೊಂಡ ಸುಧೀನ ಕೂಡಲೇ ಬಟ್ಟೆ ಅಂಗಡಿಗೆ ಅನುಮತಿ ನೀಡಲು ಒತ್ತಾಯಿಸಿದ್ದರು. ಈ ವೇಳೆ ಸುಳ್ಳು ಬಲಾತ್ಕಾರ ಪ್ರಕರಣ ಕೊಡುತ್ತೇನೆ, ಬಾಡಿಗೆ ಗೂಂಡಾಗಳಿಂದ ಕೊ* ಲೆ‌ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಉದ್ಯಮಿಗೆ ಐದು ಕೋಟಿ ವಂಚನೆ ಮಾಡಿದ್ದಾರೆ ಎಂಬ ದೂರು ದಾಖಲಾಗಿ ಬಂಧನವಾದ ಬಳಿಕ ಇತ್ತ ಸುಧೀನ್ ಎಂಬವರು ಕೂಡಾ ನನಗೂ ವಂಚನೆಯಾಗಿದೆ ಎಂದು ದೂರು ನೀಡಿದ್ದಾರೆ. ಸದ್ಯ ಈ ಬಗ್ಗೆ ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಅದರಂತೆ ಪೊಲೀಸರು ಚೈತ್ರಾ ವಿರುದ್ಧ 506, 417, 420 ಐಪಿಸಿ‌ ಸೆಕ್ಷನ್ ಅಡಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

See also  ಮಂಗಳೂರು : ಜೂನ್ 1 ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ! ಆದೇಶ ಉಲ್ಲಂಘಿಸಿದರೆ ಭಾರಿ ಪ್ರಮಾಣದ ದಂಡ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget