ಕರಾವಳಿಕ್ರೈಂರಾಜಕೀಯವೈರಲ್ ನ್ಯೂಸ್

ತನಿಖೆಗೆ ಹೆದರಿ ಚೈತ್ರಾ ಕುಂದಾಪುರ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಮನೆಯಲ್ಲಿ ಆಶ್ರಯ ಪಡೆದರಾ? ಹಿಂದೂ ಹೋರಾಟಗಾರ್ತಿ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಟ್ವಿಸ್ಟ್!

ನ್ಯೂಸ್‌ ನಾಟೌಟ್‌: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿಯೊಬ್ಬರಿಗೆ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ ಬಳಿಕ ಪೊಲೀಸರಿಗೆ ಹೆದರಿ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಮನೆಯಲ್ಲಿ ಆಶ್ರಯ ಪಡೆದಿದ್ದರು ಎಂದು ತಿಳಿದುಬಂದಿದೆ.

ನಿನ್ನೆ (ಸೆಪ್ಟೆಂಬರ್ 12) ರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್​ ಸ್ಥಳದಲ್ಲಿ ಚೈತ್ರಾನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್​ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದಳು ಎನ್ನುವ ಮಾಹಿತಿ ತಿಳಿದುಬಂದಿದೆ. ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್​ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ.

ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಚೈತ್ರಾಗೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್‌ ಮಾಧ್ಯಮ ವಕ್ತಾರೆ ಅಂಜುಂ​ ಎನ್ನುವರ ನಿವಾಸದಲ್ಲಿ ಅವಿತುಕೊಂಡಿದ್ದರು ಎಂದು ತಿಳಿದುಬಂದಿದ್ದು, ಇದೀಗ ಚೈತ್ರಾಗೆ ಆಶ್ರಯ ನೀಡಿದ್ದ ಅಂಜುಂಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದರಿಂದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಂಕಷ್ಟ ಎದುರಾಗಿದೆ ಎಂದು ವರದಿ ತಿಳಿಸಿದೆ.

ಇನ್ನು ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳನ್ನು ಉಡುಪಿಯಿಂದ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದು, ಇಂದು (ಸೆಪ್ಟೆಂಬರ್ 13) ಸಂಜೆ ವೇಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋವೊಂದು ವೈರಲ್ ಆಗಿದೆ.

Related posts

ನೀಲಿ ಹಕ್ಕಿ ಬದಲು ಟ್ವಿಟ್ಟರ್ ನಲ್ಲಿ ಕಾಣಿಸಿಕೊಂಡ ಶ್ವಾನ! ಬದಲಾಯಿತೇ ಟ್ವಿಟರ್‌ ಲೋಗೊ?

ವಿಜಯಪುರದ ಸ್ಟ್ರಾಂಗ್ ರೂಮ್​​ ಕೀ ಮನೆಯಲ್ಲೇ ಬಿಟ್ಟು ಬಂದ ಅಧಿಕಾರಿ..! ತಡವಾಗಿ ಎಣಿಕೆ ಆರಂಭ..!

ಸುಳ್ಯ: 9 ಕಾಡಾನೆಗಳಿಂದ ಸತತ 5 ದಿನ ದಾಳಿ, ಕೃಷಿಕರ ತೋಟ ಸರ್ವನಾಶ, ಕಂಗಾಲಾದ ರೈತ..!