ಕರಾವಳಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ

ನ್ಯೂಸ್ ನಾಟೌಟ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರಿ ಮಳೆಯ ಆತಂಕ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಮಲೆನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ (Weather report) ಸಾಧ್ಯತೆಯಿದೆ. ಉತ್ತರ ಒಳನಾಡಿನ ಭಾಗವಾದ ಬೆಳಗಾವಿ, ಧಾರವಾಡ, ರಾಯಚೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಹಳ ಜಿಟಿ ಜಿಟಿ ಮಳೆಯಾಗಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯದಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

Related posts

ಮತಾಂತರ ನಿ‍ಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕಡಬದ ವ್ಯಕ್ತಿ

ಗಲಭೆ ಕೇಸ್‌ ನ108 ಆರೋಪಿಗಳಿಗೆ ಜಾಮೀನು, ದರ್ಗಾದಲ್ಲಿ ಮುಸ್ಲಿಮರ ಸಂಭ್ರಮಾಚರಣೆ

ಅರಂತೋಡಿನಲ್ಲಿ ಚಿರತೆ ಹಾವಳಿ ಬಳಿಕ ಕಾಡಾನೆಯೂ ಪ್ರತ್ಯಕ್ಷ..! ಆತಂಕದಲ್ಲಿ ಸ್ಥಳೀಯರು