ಕ್ರೈಂದೇಶ-ವಿದೇಶಬೆಂಗಳೂರುವೈರಲ್ ನ್ಯೂಸ್

ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ವಾಮೀಜಿಯಿಂದ ಪೊಲೀಸರಿಗೆ ಪತ್ರ, ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದದ್ದೇಕೆ ಸ್ವಾಮೀಜಿ..?

ನ್ಯೂಸ್ ನಾಟೌಟ್: ವಿವಾದಾತ್ಮಕ ಹೇಳಿಕೆ ನೀಡಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಪಡೆದಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅನಾರೋಗ್ಯದ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಸ್ವಾಮೀಜಿ ಉಪ್ಪಾರಪೇಟೆ ಪೊಲೀಸ್ ಇನ್ಸ್‌ ಪೆಕ್ಟರ್‌ ಗೆ ಬರೆದ ಪತ್ರದಲ್ಲಿ, ನಾನು ಮಾರಕ ಕ್ಯಾನ್ಸರ್‌ ನಿಂದ ಬಳಲುತ್ತಿದ್ದೇನೆ. ವೈದ್ಯರು 10 ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ. ಡಿ.18ರಂದು ವಿಚಾರಣೆಗೆ ಹಾಜರಾಗಲು ಸಿದ್ಧನಿದ್ದೇನೆ. ಅಷ್ಟರೊಳಗೆ ವಿಚಾರಣೆ ನಡೆಸುವುದು ಅವಶ್ಯವೆನಿಸಿದಲ್ಲಿ ಮಠಕ್ಕೆ ಬರಬಹುದು. ಮಠಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಲು ಅಭ್ಯಂತರವಿಲ್ಲ. ಇಂದು (ಡಿ.2) ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ ಎಂದಿದ್ದರು.

ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗಲಿದೆ. ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.
ಈ ವಿಚಾರವಾಗಿ ಸೈಯ್ಯದ್ ಅಬ್ಬಾಸ್ ಎಂಬವರು ಸ್ವಾಮೀಜಿ ಹೇಳಿಕೆಯನ್ನು ಖಂಡಿಸಿ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‍.ಐ.ಆರ್ ದಾಖಲಾಗಿತ್ತು.

Click

https://newsnotout.com/2024/12/shabarimale-kerala-temple-viral-news-kerala/
https://newsnotout.com/2024/12/siddaramayya-kannada-news-accident-ips-viral-news/
https://newsnotout.com/2024/12/bath-towel-kannada-news-video-viral-news-video/
https://newsnotout.com/2024/12/baloon-kannada-news-7th-student-nomore-13-year-old/
https://newsnotout.com/2024/12/kananda-news-passport-verification-kannada-news-news/
https://newsnotout.com/2024/12/bjp-show-cause-notice-to-yathnal-kannada-news-vijayendra/
https://newsnotout.com/2024/12/hospital-bed-kannada-news-photo-viral-kannada-news-dec-3/

Related posts

20 ಗಂಟೆಗಳ ಸತತ ಪ್ರಯತ್ನಕ್ಕೆ ಕೊನೆಗೂ ಸಿಕ್ಕಿತು ಪ್ರತಿಫಲ..! ಬೋರ್‌ವೆಲ್‌ ನಿಂದ ಬದುಕಿಬಂದ 2 ವರ್ಷದ ಮಗು

ಸುಪ್ರೀಂ ಕೋರ್ಟ್ ವಕೀಲರಾಗಿ ಶೇಖರ್ ನೇಮಕ, ಒಕ್ಕಲಿಗ ಸಮುದಾಯಕ್ಕೆ ದೊಡ್ಡ ಸ್ಫೂರ್ತಿ

ಏನಿದು ಅನಿಲ ಸೋರಿಕೆ..! 28 ಮಂದಿ ಆಸ್ಪತ್ರೆಗೆ ದಾಖಲು..! ಇಲ್ಲಿದೆ ವೈರಲ್ ವಿಡಿಯೋ