ರಾಜಕೀಯವೈರಲ್ ನ್ಯೂಸ್

ಹೆಚ್‌.ಡಿ.ಕೆ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

223

ನ್ಯೂಸ್ ನಾಟೌಟ್: ನಿರ್ಮಲಾನಂದನಾಥ ಶ್ರೀಗಳ ಫೋನ್‌ ಅನ್ನು ಕುಮಾರಸ್ವಾಮಿ ಸಿಎಂ ಆಗಿದ್ದಾಗ ಟ್ಯಾಪ್ ಮಾಡಿಸಿದ್ರು. ಈಗ ಹೇಗೆ ಹೋಗಿ ಶ್ರೀಗಳ ಬಳಿ ಆಶೀರ್ವಾದ ಕೇಳ್ತಾರೆ ಎಂದು ಸಚಿವ ಚಲುವರಾಯಸ್ವಾಮಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಚಲುವರಾಯಸ್ವಾಮಿ ಮಾತನಾಡಿ, ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್‌ನ್ನು ಟ್ಯಾಪ್ ಮಾಡಿದ್ದಾರೆ. ಇದೀಗ ಹೇಗೆ ಅವರ ಬಳಿ ಹೋಗಿ ಕುಮಾರಸ್ವಾಮಿ ಆಶೀರ್ವಾದ ಕೇಳ್ತ ಇದ್ದಾರೆ. ನಾವು ಸಹ ಜೆಎಸ್‌ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ನಾವು ಹೋಗಿದ್ದೀವಿ, ಅವರು ಹೋಗಿದ್ದಾರೆ.

ಇದು ಚುನಾವಣೆ ವೇಳೆ ಸಹಜವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯ ಮಠ ಆದ್ರೂ ಸಹ ರಾಜ್ಯದಲ್ಲಿ ಅತ್ಯಂತ ಜಾತ್ಯತೀತ ಮಠವಾಗಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದವರು ಬಾಲಗಂಗಾಧರನಾಥ ಶ್ರೀಗಳು. ಜೆಡಿಎಸ್‌ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರು*ಕುಳ‌ ಕೊಟ್ಟರು ಎಂದು ಸಹ ಗೊತ್ತಿದೆ. ಈಗ ಚುನಾವಣೆ ಬಂದಿದೆ. ಅದಕ್ಕೆ ಮಠಕ್ಕೆ‌ ಕುಮಾರಸ್ವಾಮಿ ಹೋಗ್ತಾ ಇದ್ದಾರೆ ಅಷ್ಟೇ ಎಂದಿದ್ದಾರೆ.

See also  ಹಾವನ್ನು ಜಗಿದು ಕೊಂದ ಮೂರು ವರ್ಷದ ಬಾಲಕ! ಸತ್ತ ಹಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಆಸ್ಪತ್ರೆಗೆ ತಂದ ಪೋಷಕರು!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget