ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ಮೇಲ್ಚೆಂಬು ಎಂಬಲ್ಲಿ ಭಾನುವಾರ ಸಂಜೆ 6.30ಕ್ಕೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಪೊಯ್ಯ ಮಜಲು ಮಾಧವ ಅವರ ಸಹೋದರ ವೆಂಕಪ್ಪ ಅನ್ನುವವರ ಮನೆಗೆ ಬೆಂಕಿ ಹತ್ತಿಕೊಂಡಿದೆ. ವೆಂಕಪ್ಪ ಅವರು ಏಕಾಂಗಿಯಾಗಿ ವಾಸಿಸುತ್ತಿದ್ದರು. ಇವರ ದಾಖಲೆ ಪತ್ರಗಳು ಕೂಡ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಆಕಸ್ಮಿಕ ಬೆಂಕಿ ಅವಘಡ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.