ಚಿಕ್ಕಮಗಳೂರು

ನೋಡ ನೋಡುತ್ತಿದ್ದಂತೆ ಮನೆಯೊಳಗೆ ನುಗ್ಗಿದ ಇನ್ನೋವಾ ಕಾರು..!ರಾತ್ರಿ ವೇಳೆ ನಿದ್ರೆಯ ಮಂಪರಿನಲ್ಲಿ ಅಪಘಾತ ಸಂಭವಿಸಿತೇ?

149

ನ್ಯೂಸ್ ನಾಟೌಟ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿ ಕೊಂಡು ಹೋಗುತ್ತಿದ್ದ ಕಾರೊಂದು ನೇರವಾಗಿ ಮನೆಯೊಳಗೆ ನುಗ್ಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟೆಗೆಹಾರ ಸಮೀಪ ಬಿದರಹಳ್ಳಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದ್ದು,ಮನೆಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿ ನೇರವಾಗಿ ಮನೆಗೆ ಡಿಕ್ಕಿ ಹೊಡೆದಿದೆ.ಸೋಮವಾರ ರಾತ್ರಿ ಸುಮಾರು 1-30ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಚಾಲಕನು ನಿದ್ರೆಯ ಮಂಪರಿನಿಂದ ಇದ್ದು ಈ ಅವಘಡ ಸಂಭವಿಸಿತೇ ಎನ್ನುವ ಅನುಮಾನ ವ್ಯಕ್ತವಾಗಿದೆ.

ರಾತ್ರಿ ವೇಳೆ ನಿದ್ದೆಯಲ್ಲಿ ಹೆದ್ದಾರಿ ಬದಿಯಲ್ಲಿ ಇರುವ ಬಿದರಹಳ್ಳಿಯ ಹನೀಫ್ ಎಂಬುವವರ ಕುಟುಂಬ ಭಾರಿ ಶಬ್ಧವಾಗುತ್ತಿರುವುದನ್ನು ಕಂಡು ಹೊರಗಡೆ ಬಂದು ನೋಡಿದಾಗ ಮನೆಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಮನೆಯ ಗೋಡೆ ಕುಸಿದು ಬಿದ್ದಿದೆ. ಪಕ್ಕದಲ್ಲಿಯೇ ವಿದ್ಯುತ್ ಕಂಬಗಳು ಇದ್ದು ವಿದ್ಯುತ್ ಕಂಬವೊಂದು ತುಂಡಾಗಿದೆ ಎಂಬ ಮಾಹಿತಿಯಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

See also  ನೋಡ ನೋಡುತ್ತಿದ್ದಂತೆ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್‌ ಮರ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget