ನ್ಯೂಸ್ ನಾಟೌಟ್: ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿರುವ ಘಟನೆಯು ಚಾರ್ಮಾಡಿ ಘಾಟ್ ನ ರಸ್ತೆಯ ತಿರುವಿನಲ್ಲಿ ನಡೆದಿದೆ.
ಈ ವೇಳೆ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು ಆಗ ಬೇಕಾದ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ.
ಇಂದು ಬಸ್ಸಿನಲ್ಲಿ ಸಂಚರಿಸುತ್ತಿರುವಾಗ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಶಿವಮೊಗ್ಗ ವಿಭಾಗದ ಬಸ್ ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಹಠಾತ್ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕ ಎಚ್ಚರಿಕೆಯಿಂದ ಬಸ್‌ನ್ನು ನಿಯಂತ್ರಣಕ್ಕೆ ತಂದಿದ್ದು, ಮುಂದಾಗುತ್ತಿದ್ದ ಬಹುದೊಡ್ಡ ಅಪಘಾತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಳಿಕ ಪ್ರಯಾಣಿಕರನ್ನು ಬದಲಿ ಬಸ್‌ನಲ್ಲಿ ಕಳಿಸಿಕೊಡಲಾಯಿತು.