ನ್ಯೂಸ್ ನಾಟೌಟ್ : ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಶೃಂಗೇರಿಯಿಂದ ವರದಿಯಾಗಿದೆ.ಅದೇ ಸ್ಥಳದಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದಾಗ ಈ ದುರ್ಘಟನೆ ಸಂಭವಿಸಿದೆ.
ಶೃಂಗೇರಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು,ಗುಂಪೊಂದು ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಚಾಲಕ ಸೇರಿದಂತೆ ಐವರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ ಎಂದು ಆರೋಪಿಸಲಾಗಿದೆ.ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಕೊಪ್ಪ ಮೂಲದ ಕುಟುಂಬ ಮೂರು ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಹರಿಹರಪುರ ಸಮೀಪ ಬೈಕ್ ಮತ್ತು ಕಾರು ನಡುವೆ ಡಿಕ್ಕಿಯಾಗಿದೆ. ಈ ವಿಚಾರವಾಗಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಪ್ಪ ಡಿವೈಎಸ್ ಪಿ ಬಾಲಾಜಿ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಬೈಕ್ ಕಾರು ಅಪಘಾತ ಪ್ರಕರಣ ಹಾಗೂ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ತಿಳಿಸಿದ್ದಾರೆ.