Latest

ಮಂಗನ ಕಾಯಿಲೆಗೆ ಮೊದಲ ಬಲಿ! ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು

1.2k
Spread the love

ನ್ಯೂಸ್‌ ನಾಟೌಟ್: ಮಂಗನ ಕಾಯಿಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದ್ದು, ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಕಟ್ಟಿನಮನೆ ಗ್ರಾಮದ ಮಹಿಳೆ ಮಂಗನ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ.

ತಾಯಿ ಮತ್ತು ಮಗ ಮೇಲ್ಪಾಲ್ ಗ್ರಾಮದ ಕಾಫಿತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಂಗನ ಕಾಯಿಲೆ ಜತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇತ್ತು ಎನ್ನಲಾಗಿದೆ. ಈ ಹಿನ್ನಲೆ ಹೆಚ್ಚಿನ‌ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾರೆ.ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಈ ವರ್ಷ ಮೊದಲ ಬಲಿ ಪಡೆದುಕೊಂಡಿದೆ.

See also  ಗುತ್ತಿಗಾರು:ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿದ ಕಾರು!!ಮನೆ,ಕಾರು ಜಖಂ;ಕಾರಿನಲ್ಲಿದ್ದವರು ಅಪಾಯದಿಂದ ಪಾರು
  Ad Widget   Ad Widget   Ad Widget   Ad Widget   Ad Widget   Ad Widget