ಕೆವಿಜಿ ಕ್ಯಾಂಪಸ್‌

ಸುಳ್ಯ: ಎನ್ನೆoಪಿಯುಸಿಯಲ್ಲಿ ಮಕ್ಕಳ ದಿನಾಚರಣೆ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ

152

ನ್ಯೂಸ್ ನಾಟೌಟ್: ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಮಕ್ಕಳ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯೆ ಮಿಥಾಲಿ ಪಿ. ರೈ ವಹಿಸಿದ್ದರು.

ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನೆಯ ಆಟಗಳನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಬೋಧಕ -ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget