ನ್ಯೂಸ್ ನಾಟೌಟ್: ಸೋಮವಾರ(ಎ14) ಆಕಸ್ಮಿಕವಾಗಿ ಕಾರಿನೊಳಗೆ ಸಿಲುಕಿಕೊಂಡು ನಾಲ್ಕು ಮತ್ತು ಐದು ವರ್ಷದ ಹೆಣ್ಣು ಮಕ್ಕಳಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಹೈದರಾಬಾದ್ ನ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ದಾಮರಗಿಡ್ಡ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಸೋದರಸಂಬಂಧಿ ಮಕ್ಕಳು ಆಟವಾಡುತ್ತಿದ್ದಾಗ ಸಂಬಂಧಿಕರ ಮನೆಯ ಬಳಿ ನಿಲ್ಲಿಸಿದ್ದ ಕಾರನ್ನು ಹತ್ತಿ ಬಾಗಿಲು ಹಾಕಿ ಸಿಲುಕಿಕೊಂಡಿದ್ದಾರೆ. ಮಕ್ಕಳು ಕಾರಿನೊಳಗೆ ಸಿಲುಕಿಕೊಂಡಿರುವುದು ಅವರ ಪೋಷಕರಿಗೆ ಅಥವಾ ಅವರ ಇತರ ಕುಟುಂಬ ಸದಸ್ಯರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 30-45 ನಿಮಿಷಗಳ ನಂತರ, ಹುಡುಗಿಯರನ್ನು ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಗಮನಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಮೃತ ಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ವಿವಾಹ ಸಮಾರಂಭಕ್ಕೆಂದು ಮಕ್ಕಳು ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಘಟನೆ ನಡೆದಿದೆ.
ಈ ರೈಲಿನಲ್ಲಿ ನೀವು ಪ್ರಯಾಣಿಸಿದರೆ 3 ಹೊತ್ತು ಉಚಿತ ಊಟ..! ಕಳೆದ 29 ವರ್ಷಗಳಿಂದ ಈ ಸೇವೆ..! ಇಲ್ಲಿದೆ ಸಂಪೂರ್ಣ ಮಾಹಿತಿ