ಕರಾವಳಿ

ಮಕ್ಕಳ ಕಳ್ಳರು ಇದ್ದಾರೆ.. ನಿಜಾನಾ? ಸುಳ್ಳಾ?

477

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಹುಷಾರ್‌, ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿ ಎಂದೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದವು. ಈ ವಿಚಾರ ತಿಳಿದ ನಂತರ ಅನೇಕ ಪೋಷಕರು ಆತಂಕಕ್ಕೆ ಒಳಗಾಗಿದ್ದರು. ಅಷ್ಟರ ಮಟ್ಟಿಗೆ ಜಾಲತಾಣಗಳಲ್ಲಿ ಸುದ್ದಿ ಹರಿದಾಡಿದ್ದವು. ಇದೀಗ ಎಲ್ಲ ಗೊಂದಲ ಹಾಗೂ ಅನುಮಾನಗಳಿಗೆ ಸ್ವತಃ ಕರ್ನಾಟಕ ಪೊಲೀಸ್ ಇಲಾಖೆ ಉತ್ತರ ನೀಡಿದೆ.

ಮಕ್ಕಳ ಕಳ್ಳರು ಇರುವ ಬಗ್ಗೆ ಐಪಿಎಸ್ ಅಧಿಕಾರಿ ಇಶಾ ಪಂತ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ವಿಡಿಯೋಗಳು ಹರಿದಾಡುತ್ತಿದೆ. ಅಂತಹ ಯಾವ ಘಟನೆಯೂ ರಾಜ್ಯದಲ್ಲಿ ನಡೆದಿಲ್ಲ. ಈ ಬಗ್ಗೆ ಯಾರೂ ಆತಂಕಪಡಬೇಕಾದ ಅಗತ್ಯವಿಲ್ಲ. ಸಾರ್ವಜನಿಕರು ಯಾವುದಾದರೂ ವ್ಯಕ್ತಿಯ ಮೇಲೆ ಅನುಮಾನ ಬಂದರೆ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಅದನ್ನು ಬಿಟ್ಟು ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸಕ್ಕೆ ಕೈ ಹಾಕಬೇಡಿ ಎಂದು ತಿಳಿಸಿದ್ದಾರೆ.

See also  ಸುಳ್ಯ: ಎನ್‌ಎಮ್‌ಸಿಯಲ್ಲಿ ಮನೆ ಮಾಡಿದ ವಾರ್ಪಿಕೋತ್ಸವ ಸಂಭ್ರಮ, ಕಲರ್ಫುಲ್ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿ,ವಿದ್ಯಾರ್ಥಿನಿಯರು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget