ಕ್ರೈಂದೇಶ-ಪ್ರಪಂಚಮಹಿಳೆ-ಆರೋಗ್ಯವೈರಲ್ ನ್ಯೂಸ್

ಚೀನಾದಲ್ಲಿ ಮತ್ತೆ ಉಲ್ಬಣಿಸಿತಾ ನಿಗೂಢ ನ್ಯುಮೋನಿಯಾ..? ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರ ನೀಡಿದ ಮಾರ್ಗಸೂಚಿಯಲ್ಲೇನಿದೆ?

ನ್ಯೂಸ್ ನಾಟೌಟ್: ಚೀನಾದಲ್ಲಿ ನಿಗೂಢ ನ್ಯುಮೋನಿಯಾ (pneumonia) ಸೋಂಕು ಹೆಚ್ಚುತ್ತಿರುವ ಹಿನ್ನೆಲೆ, ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಎಚ್ಚರಿಕೆ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ ಎಂದು ವರದಿ ತಿಳಿಸಿದೆ.

ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಾಖಂಡ, ಹರಿಯಾಣ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ.

ಈ ಕುರಿತು ಕರ್ನಾಟಕ ಆರೋಗ್ಯ ಇಲಾಖೆ ಕೂಡ ಹೆಚ್ಚಿನ ಜಾಗೃತಿ ವಹಿಸುತ್ತಿದ್ದು, ಕಾಲೋಚಿತ ಜ್ವರದ ಬಗ್ಗೆ ನಾಗರಿಕರಲ್ಲಿ ಜಾಗೃತರಾಗಿರುವಂತೆ ಕೇಳಿಕೊಂಡಿದೆ. ಜ್ವರದ ಲಕ್ಷಣಗಳು ಮತ್ತು ಅಪಾಯಕಾರಿ ಅಂಶಗಳ ಬಗ್ಗೆ ಪಟ್ಟಿ ಮಾಡಿದೆ. ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳುವುದು, ಆಗಾಗ್ಗೆ ಕೈಗಳನ್ನು ತೊಳೆಯುವುದು, ಮುಖವನ್ನು ಸ್ಪರ್ಶಿಸುವುದನ್ನು ತಪ್ಪಿಸುವುದು ಮತ್ತು ಜನಸಂದಣಿ ಸ್ಥಳಗಳಲ್ಲಿ ಮಾಸ್ಕ್​​​​ ಬಳಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗುವ ಎಲ್ಲಾ ತರಹದ ನ್ಯುಮೋನಿಯಾ ಸೋಂಕು ಪ್ರಕರಣಗಳ ಸಂಪೂರ್ಣ ಮಾಹಿತಿಯನ್ನು ಪ್ರತಿನಿತ್ಯ ಐಡಿಎಸ್‌ಪಿ – ಐಹೆಚ್‌ಐಪಿ ವೆಬ್‌ಸೈಟ್‌ಗೆ ಆಪ್‌ಲೋಡ್‌ ಮಾಡಬೇಕು. ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಲಾಗಿದೆ.
ಉತ್ತರ ಚೀನಾದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ರಾಜ್ಯದಲ್ಲಿ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (ನ.೨೯) ಇಂದು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ ಎನ್ನಲಾಗಿದೆ.

https://newsnotout.com/2023/11/metro-and-love-issue-video-viral/

Related posts

ಇಂದು ಕಾಶ್ಮೀರದಲ್ಲಿ ಶಾರದಾ ಮೂರ್ತಿ ಪ್ರತಿಷ್ಠಾಪನೆ

ಮದ್ಯದಂಗಡಿ ವಿಚಾರಕ್ಕೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ಶಾಸಕರು..! ಯಾರು ಆ ಶಾಸಕರು? ಏನಿದು ಘಟನೆ?

ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತು ರಾಜ್ಯಾದ್ಯಂತ ಪ್ರತಿಭಟನೆ..! ಮದ್ಯ ಮಾರಾಟ ಬಂದ್ ​ಗೆ ನಿರ್ಧಾರ..! ರಾಜ್ಯಪಾಲರಿಗೆ ಪತ್ರ..!