Latestಕ್ರೀಡೆಕ್ರೀಡೆ/ಸಿನಿಮಾಕ್ರೈಂಬೆಂಗಳೂರುಬೆಂಗಳೂರುವೈರಲ್ ನ್ಯೂಸ್

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: KSCA ಹುದ್ದೆಗೆ ಇಬ್ಬರು ಪದಾಧಿಕಾರಿಗಳು ರಾಜೀನಾಮೆ..! ಸಿಐಡಿ ಯಿಂದ ತನಿಖೆ..!

603

ನ್ಯೂಸ್ ನಾಟೌಟ್: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

ಕೆಎಸ್‌ ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ (ಜೂ.6) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಪ್ರಕಟಣೆ ಹೊರಡಿಸಿದ್ದಾರೆ.
ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ , ತನಿಖೆಯನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್‌ ಸಿಬಿ ಆಡಳಿತ ಮಂಡಳಿ, ಡಿಎನ್‌ ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್‌ ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಆರ್‌ ಸಿಬಿ ಮ್ಯಾನೇಜ್‌ ಮೆಂಟ್‌, ಡಿಎನ್‌ ಎ ಇವೆಂಟ್‌ ಮ್ಯಾನೇಜ್ಮೆಂಟ್ ‌ಹಾಗೂ ಕೆಎಸ್‌ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್‌ ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 11 ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ.  

ಭಾರತಕ್ಕೆ ನಾಲ್ಕನೇ ಬಾರಿ ಪತ್ರ ಬರೆದ ಪಾಕಿಸ್ತಾನ..! ಸಿಂಧೂ ಜಲ ಒಪ್ಪಂದ ಮರುಪರಿಶೀಲಿಸುವಂತೆ ಮತ್ತೆ ಒತ್ತಾಯ..!

See also  ಮಂತ್ರಾಲಯದ ಗುರುರಾಯರ ದರ್ಶನ ಪಡೆದು ಬಳ್ಳಾರಿಗೆ ತೆರಳಿದ ದರ್ಶನ್‌ ಪತ್ನಿ, ರಾತ್ರಿಯೇ ಬಂದು ಮಂತ್ರಾಲಯದಲ್ಲಿ ತಂಗಿದ್ದ ವಿಜಯಲಕ್ಷ್ಮಿ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget