Latestಕ್ರೀಡೆಕ್ರೀಡೆ/ಸಿನಿಮಾಕ್ರೈಂಬೆಂಗಳೂರುರಾಜಕೀಯ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು..! ಇಂದು(ಜೂ.5) ಮದ್ಯಾಹ್ನ 2:30ಕ್ಕೆ ವಿಚಾರಣೆ..!

493

ನ್ಯೂಸ್ ನಾಟೌಟ್ : ಆರ್.ಸಿ.ಬಿ. ಮೊದಲ ಬಾರಿ ಐಪಿಎಲ್ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ(ಜೂ.4) ಆಯೋಜಿಸಿದ್ದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್) ದಾಖಲಿಸಿಕೊಂಡಿದೆ.

ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ.ಸಿ.ಎಂ. ಜೋಶಿಯವರಿದ್ದ ಪೀಠ, ವಿಚಾರಣೆ ನಡೆಸಿ ದುರಂತದ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಇಂದು(ಜೂ.5) ಅಪರಾಹ್ನ 2:30ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಜನರ ಸಾವುನೋವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್ ಪೀಠ, ಭದ್ರತಾ ಲೋಪದ ಬಗ್ಗೆ ಸರ್ಕಾರದ ವರದಿ ಕೇಳಲಾಗಿದೆ. ವಿಚಾರಣೆ 2:30ಕ್ಕೆ ನಿಗದಿಯಾಗಿದೆ ಎಂದು ತಿಳಿಸಿದೆ.
ಪತ್ರಿಕೆಗಳಲ್ಲಿ ಬಂದ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್ ನಿನ್ನೆ ನಡೆದ ಘಟನೆ ತೀವ್ರ ಕಳವಳಕಾರಿಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಭ್ರಮಾಚರಣೆಗೆ ರಾಜ್ಯ ಸರಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಸೂಚನೆ ನೀಡಿದೆ. ವಿಚಾರಣೆ ವೇಳೆ ಉಪಸ್ಥಿತರಿದ್ದ ಎಜಿ ಶಶಿಕಿರಣ್ ಶೆಟ್ಟಿ, ಹೈಕೋರ್ಟ್ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು. ನಡೆದ ಘಟನೆ, ಸರ್ಕಾರ ಕೈಗೊಂಡಿರುವ ಕ್ರಮ ಎಲ್ಲದರ ಮಾಹಿತಿ ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ. ಎಲ್ಲಾ ವಿವರಗಳನ್ನು ಒದಗಿಸುವುದಾಗಿ ಎಜಿ ಶಶಿಕಿರಣ್ ಶೆಟ್ಟಿ ಹೈಕೋರ್ಟ್ ಗೆ ಮಾಹಿತಿ ನೀಡಿದರು.

ಮಾತೇ ಬರದಂತಾಗಿದೆ, ಹೃದಯ ಒಡೆದಿದೆ ಎಂದ ವಿರಾಟ್ ಕೊಹ್ಲಿ..! ಆರ್‌ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಬಗ್ಗೆ ವಿರಾಟ್ ಕೊಹ್ಲಿ ಮೊದಲ ಪ್ರತಿಕ್ರಿಯೆ..!

See also  ನಾನು ಶಿವಣ್ಣನ ಕ್ಷಮೆಯನ್ನು ಒಪ್ಪಲ್ಲ ಎಂದದ್ದೇಕೆ ತಮಿಳು ನಟ? ನನ್ನ ಚಿತ್ರಕ್ಕೂ ಕಾವೇರಿ ವಿವಾದಕ್ಕೂ ಸಂಬಂಧವೇ ಇಲ್ಲ ಎಂದದ್ದೇಕೆ ನಟ ?
  Ad Widget   Ad Widget     Ad Widget   Ad Widget   Ad Widget   Ad Widget