ನ್ಯೂಸ್ ನಾಟೌಟ್: ಮಕ್ಕಳಿಗೆ ಚಾಕ್ಲೆಟ್, ಬಿಸ್ಕೆಟ್ ತರಲು ಅಂಗಡಿಗೆ ಹೋಗುತ್ತಿದ್ದ ತಾಯಿ ಅಪಘಾತದಲ್ಲಿ ಸಾವನ್ನಪ್ಪಿರೋ ದಾರುಣ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ.
ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಚಲಿಸುತ್ತಿದ್ದ ಇನೋವಾ ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮಹಿಳೆ ಚೆಂಡಿನಂತೆ ಮೇಲೆ ಹಾರಿ ಕೆಳಗೆ ಬಿದ್ದಿದ್ದಾರೆ.
ಕಾರು ಡಿಕ್ಕಿಯಾಗಿ ಮೇಲೆ ಹಾರಿದ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಹಿಳೆಗೆ ಡಿಕ್ಕಿ ಹೊಡೆದ ಇನೋವಾ ಕಾರು ಸ್ಥಳದಿಂದ ಎಸ್ಕೇಪ್ ಆಗಿದೆ.
ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದ ಗುಲಾಬಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಗಂಡ ಮತ್ತು ಮಗುವಿನ ಮುಂದೆ ತನಗೆ ತಾನೇ ಅಂತ್ಯಕ್ರಿಯೆ ಮಾಡಿಕೊಂಡ ಮಹಿಳೆ..! ಎನಿದು ವಿಚಿತ್ರ ಘಟನೆ..?