Latestರಾಜಕೀಯಸಿನಿಮಾ

ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು ಎಂದು ರಶ್ಮಿಕಾ ವಿರುದ್ಧ ಕಿಡಿಕಾರಿದ ಶಾಸಕ..! ಏನಿದು ವಿವಾದ..?

1.2k

ನ್ಯೂಸ್ ನಾಟೌಟ್: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ವಿ, ಆದರೆ ನನಗೆ ಟೈಂ ಇಲ್ಲ, ಬರಲ್ಲ ಅಂತಾರೆ ಎಂದು ಶಾಸಕ ಗಣಿಗ ಸಿನಿಮಾ ನಟರ ವಿರುದ್ಧ ರವಿಕುಮಾರ ಕಿಡಿಕಾರಿದ್ದಾರೆ.

“ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್‌ ನಲ್ಲಿ ಇರೋದು, ನನಗೆ ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ?” ಎಂದು ಕೆಂಡಕಾರಿದರು.

ನಾನು ಸಿಎಂ- ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು ಅಲ್ವಾ, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್. ಚಲನಚಿತ್ರ ಮಂಡಳಿಯವರು ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

See also  ಹಂದಿ ಬೇಟೆಗೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ..! ಮನಕಲಕುವ ಘಟನೆ ಕಂಡು ರೈತ ಕಂಗಾಲು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget