ಕರಾವಳಿ

ಹೋಟೆಲ್ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಮೃತದೇಹ ಪತ್ತೆ..!ಮಲಯಾಳಂನ ಖ್ಯಾತ ನಟನಿಗೆ ಆಗಿದ್ದೇನು?

ನ್ಯೂಸ್ ನಾಟೌಟ್ : ಕೇರಳದ ಕೊಟ್ಟಯಂನ ಪಂಪಡಿ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಖ್ಯಾತ ನಟ ವಿನೋದ್ ಥಾಮಸ್(೪೫ ವರ್ಷ) ಅವರ ಮೃತದೇಹ ಪತ್ತೆಯಾಗಿದೆ ಎನ್ನುವ ಘಟನೆ ವರದಿಯಾಗಿದೆ.ಹೋಟೆಲ್ ಅಂಗಳದಲ್ಲಿ ನಿಲ್ಲಿಸಲಾಗಿರುವ ಕಾರಿನಲ್ಲಿ ಬಹಳ ಸಮಯದಿಂದ ಒಬ್ಬ ವ್ಯಕ್ತಿ ಇದ್ದಾರೆ ಎಂದು ಹೋಟೆಲ್ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

‘ಕಾರಿನಲ್ಲಿ ಒಬ್ಬ ವ್ಯಕ್ತಿ ಇರುವುದನ್ನು ನಾವು ಗಮನಿಸಿದೆವು. ಬಾಗಿಲು ತೆಗೆದು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ ಅವರನ್ನು ಪರೀಕ್ಷೆ ನಡೆಸಿದ ವೈದ್ಯರು ಆತ ಮೃತಪಟ್ಟಿದ್ದಾನೆ ಎಂದು ದೃಢಪಡಿಸಿದರು’ ಎಂಬುದಾಗಿ ಪೊಲೀಸರು ಹೇಳಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ.ಥಾಮಸ್ ಅವರು ‘ಅಯ್ಯಪ್ಪನುಮ್ ಕೊಶ್ಯುಮ್’, ‘ನಾಥೋಲಿ ಒರು ಚೆರಿಯ ಮೀನಲ್ಲಾ’, ‘ಒರು ಮುರೈ ವಂತ್ ಪಾಠಯಾ’, ‘ಹ್ಯಾಪಿ ವೆಡ್ಡಿಂಗ್’ ಮತ್ತು ‘ಜೂನ್’ ಇವೇ ಮುಂತಾದ ಚಲನಚಿತ್ರಗಳ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದಾರೆ.

Related posts

ಕರಾವಳಿಗೆ ಕಾಲಿಟ್ಟ ಜ್ವರ, ತಲೆನೋವು, ವಾಂತಿ, ಭೇದಿ..!

ಬಿಜೆಪಿಗೆ ರಾಜಿನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಜಗದೀಶ್‌ ಶೆಟ್ಟರ್,ಮಾಜಿ ಸಿ.ಎಂ.ನ್ನು ಆತ್ಮೀಯವಾಗಿ ಬರಮಾಡಿಕೊಂಡ ಮಲ್ಲಿಕಾರ್ಜುನ ಖರ್ಗೆ

ದೇವರಕೊಲ್ಲಿ: ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನವರಾತ್ರಿ ಉತ್ಸವಕ್ಕೆ ಸಿದ್ಧತೆ