ಕರಾವಳಿ

ನಾಳೆ ಸಿಎಂ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ಬುಧವಾರ (ಏ.27)ದಂದು ದಕ್ಷಿಣ ಕನ್ನಡ ಜಿಲ್ಲಾಪ್ರವಾಸ ಕೈಗೊಂಡಿದ್ದಾರೆ.

ಏ.2 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿ, ಬೆಳಗ್ಗೆ 11.50ಕ್ಕೆ ಜಿಲ್ಲಾ ಪಂಚಾಯತ್ ಗೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ನಲ್ಲಿ ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೂಡಬಿದಿರೆಗೆ ತೆರಳಿ ಅಲ್ಲಿನ ಎಕ್ಸಲೆಂಟ್ ಪಿ.ಯೂ ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. 3.30ಕ್ಕೆ ಜೈನ ಬಸದಿಗೆ ಭೇಟಿ ನೀಡುವರು. ಸಂಜೆ 3.50ಕ್ಕೆ ಮೂಡಬಿದಿರೆಯ ಪ್ರೆಸ್‍ ಕ್ಲಬ್ ಆವರಣದಲ್ಲಿ ನೂತನ ಕಟ್ಟಡಕ್ಕೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಲ್ಲದೆ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿರುವರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

13 ದಿನಗಳಿಂದ ನಾಪತ್ತೆಯಾಗಿದ್ದ ಯುವತಿ ಪತ್ತೆ,ಮದುವೆಯಾಗಿ ಠಾಣೆಗೆ ಹಾಜರಾದ ಶಿವಾನಿ

ಪೆರಾಜೆ: ಕಾಲು ಸಂಕದಿಂದ ಜಾರಿ ಬಿದ್ದು ಯುವಕ ಸಾವು, ಕಣ್ಣೀರಾದ ಬಂಧು ಬಳಗ

ಸುಬ್ರಹ್ಮಣ್ಯ: ನಕ್ಸಲ್ ಹೆಜ್ಜೆ ಆತಂಕ, ಪೊಲೀಸ್ ಕೊಂಬಿಂಗ್, ತೀವ್ರ ಶೋಧ, ಇಬ್ಬರು ನಕ್ಸಲ್ ಮಾಹಿತಿದಾರರು ಪೊಲೀಸ್ ಬಲೆಗೆ..!