ಕರಾವಳಿಕ್ರೈಂಬೆಂಗಳೂರು

ಕೋಮು ದ್ವೇಷಕ್ಕೆ ಬಲಿಯಾಗಿದ್ದ ಬೆಳ್ಳಾರೆಯ ಮಸೂದ್, ದೀಪಕ್ ರಾವ್, ಫಾಝಿಲ್ ಕುಟುಂಬಕ್ಕೆ ತಲಾ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಸಿದ್ದು..!ಕೊನೆಗೂ ನೊಂದ ಕುಟುಂಬಕ್ಕೆ ಪರಿಹಾರದ ಆಸರೆ

298

ನ್ಯೂಸ್ ನಾಟೌಟ್: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು ಸೋಮವಾರ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್, ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು.
ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ಮತ್ತಿತರ ನಾಯಕರು ಉಪಸ್ಥಿತರಿದ್ದರು.

See also  Kantara-1: ರಿಷಬ್​ ಪತ್ನಿ ನಟಿಸಲಿದ್ದಾರಾ..? ಈ ಬಗ್ಗೆ ಪ್ರಗತಿ ಶೆಟ್ಟಿ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget