ನ್ಯೂಸ್ ನಾಟೌಟ್ : ಮೈಸೂರಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆ ಕಟ್ಟಿಸುತ್ತಿದ್ದು, ಒಂದೆರಡು ತಿಂಗಳಲ್ಲಿ ಮನೆ ಗೃಹ ಪ್ರವೇಶ ಆಗಲಿದೆ ಎನ್ನಲಾಗಿದೆ. ಈ ಹೊತ್ತಿನಲ್ಲೇ ಮನೆಗೆ ಕೂಗಳತೆ ದೂರದಲ್ಲಿರುವ ತರಕಾರಿ, ಟೀ, ಫಾಸ್ಟ್ ಫುಡ್ ಅಂಗಡಿಗಳ ತೆರವಿಗೆ ನಗರ ಪಾಲಿಕೆ ಮುಂದಾಗಿದೆ.
ಮೈಸೂರು ಪಾಲಿಕೆಯು ವಿಶ್ವಮಾನವ ಜೋಡಿ ರಸ್ತೆಯ ಬೀದಿಬದಿ ವ್ಯಾಪಾರಸ್ಥರ ಅಂಗಡಿ ತೆರವಿಗೆ ನೋಟಿಸ್ ನೀಡಿದೆ. ಪಾಲಿಕೆಯ ಈ ನಿರ್ಧಾರಕ್ಕೆ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಮನೆ ಕಟ್ಟಿಸುತ್ತಿದ್ದಾರೆ. ಇನ್ನೂ ಒಂದೆರಡು ತಿಂಗಳಲ್ಲಿ ಮನೆ ಗೃಹಪ್ರವೇಶ ಮಾಡಲಾಗುತ್ತಿರುವ ಬೆನ್ನಲ್ಲೇ, ನಗರ ಪಾಲಿಕೆಯಿಂದ ದಿಢೀರ್ ಫುಟ್‌ಪಾತ್ ತೆರವು ಹೆಸರಲ್ಲಿ ಮನೆಯ ಕೂಗಾಳತೆ ದೂರದಲ್ಲಿರುವ 20 ಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಸ್ಥರನ್ನು ಎತ್ತಂಗಡಿ ಮಾಡಿಸಲಾಗುತ್ತಿದೆ.
ಸಿಎಂ ಮನೆಯಿಂದ 100 ಮೀಟರ್ ಅಂತರದಲ್ಲಿ 20ಕ್ಕೂ ಜನರು ತರಕಾರಿ, ಟೀ, ಫಾಸ್ಟ್‌ಫುಡ್ ಅಂಗಡಿ ಇಟ್ಟುಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ಅಲ್ಲೇ ವ್ಯಾಪಾರ ಮಾಡುತ್ತಿದ್ದರು. ಇದೀಗ ಮೈಸೂರು ಪಾಲಿಕೆಗೆ ಬೆಂಗಳೂರು ಮೂಲದ ವಕೀಲರೊಬ್ಬರು ದೂರು ಕೊಟ್ಟಿದ್ದಾರೆ ಎಂದು ಹೇಳಿ ವ್ಯಾಪಾರಸ್ಥರಿಗೆ ಅಂಗಡಿ ಹಾಕದಂತೆ ನೋಟಿಸ್ ನೀಡಿದ್ದಾರೆ ಎಂದು ಸಮರ್ಥನೆ ನೀಡಲಾಗಿದೆ.