ದೇಶ-ವಿದೇಶಬೆಂಗಳೂರುರಾಜಕೀಯರಾಜ್ಯ

ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಭೇಟಿಗೆ ಸಮಯ ನಿಗದಿ..! ಹಲವು ಸಚಿವರ ಜೊತೆ ಸಿಎಂ ದೆಹಲಿಗೆ ಪ್ರಯಾಣ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಜೂನ್ 29ರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ(ಜೂ.27) ತಿಳಿಸಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಇಂದು(ಜೂ.27) ರಾಜ್ಯದ ಸಂಸದರ ಜೊತೆ ಸಭೆ ನಡೆಸುತ್ತೇನೆ. ರಾಜ್ಯಕ್ಕೆ ಬರಬೇಕಿರುವ ಅನುದಾನ, ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಲಿದ್ದೇನೆ ಎಂದು ತಿಳಿಸಿದರು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚಿಸಲಿದ್ದೇನೆ. ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪಿಸಲಿದ್ದೇನೆ. ಇದಕ್ಕಾಗಿ ಸಂಸದರ, ರಾಜ್ಯಸಭಾ ಸದಸ್ಯರ ಜತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ವಿವಿಧ ಇಲಾಖೆಗಳ ಸಚಿವರೂ ನನ್ನ ಜತೆ ದೆಹಲಿಗೆ ಬರಲಿದ್ದಾರೆ. ಅಲ್ಲಿ ಭೂಸಾರಿಗೆ ಸಚಿವರನ್ನು ಭೇಟಿಯಾಗಲಿದ್ದೇವೆ. ಗೃಹ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದೇವೆ. ಹಣಕಾಸು ಸಚಿವರನ್ನೂ ಭೇಟಿಯಾಗಲು ಪ್ರಯತ್ನಿಸುತ್ತೇವೆ. ಪ್ರಧಾನಿ ಹಾಗೂ ಗಡ್ಕರಿ ಭೇಟಿಗೆ ಸಮಯ ನಿಗದಿಯಾಗಿದೆ. ಗೃಹ ಸಚಿವರ ಭೇಟಿಗೆ ಇನ್ನಷ್ಟೇ ಸಮಯ ನಿಗದಿಯಾಗಬೇಕಿದೆ ಎಂದು ಅವರು ಮಾಹಿತಿ ನೀಡಿದರು. ರೈಲ್ವೆ ಹಾಗೂ ನೀರಾವರಿ ಸಚಿವರನ್ನೂ ಭೇಟಿಯಾಗಲಿದ್ದೇವೆ ಎಂದರು.

Click 👇

https://newsnotout.com/2024/06/lk-advani-doctors-kannada-news-health-issue-wednesday
https://newsnotout.com/2024/06/kodagu-bhagamandala-madikeri-kannada-news-triveni

Related posts

ಸಹೋದರರ ನಡುವೆ ತಂದೆಯ ಅಂತ್ಯಕ್ರಿಯೆಗಾಗಿ ಜಗಳ..! ತಂದೆಯ ಅರ್ಧ ಮೃತದೇಹ ಕೇಳಿದ ಮಗ..!

ರೈಲ್ವೆ ದುರಂತ: ಹಳಿ ತಪ್ಪಿದ 18 ಬೋಗಿಗಳು..! ಇಬ್ಬರು ಮೃತ್ಯು, ಹಲವರಿಗೆ ಗಾಯ

ಸಿಖ್ ಪೇಟ ತೊಟ್ಟು ಭಕ್ತರಿಗೆ ಪ್ರಸಾದ ಬಡಿಸಿದ ಮೋದಿ, ಗುರುದ್ವಾರದಲ್ಲಿ ವಿಶೇಷ ಪ್ರಾರ್ಥನೆ