ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಸಂಘಪರಿವಾರದಲ್ಲಿ ಸಕ್ರಿಯರಾಗಿರುವ ಬಿ.ಎಲ್ ಸಂತೋಷ್ ಆಯ್ಕೆಯಾಗುವುದು ಖಚಿತ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸಂಜೆ ನಡೆಯುವ ಶಾಸಕಾಂಗ ಸಭೆಯಲ್ಲಿ ಅಧಿಕೃತ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ. ಬಿ.ಎಲ್ ಸಂತೋಷ್ ಆಯ್ಕೆ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬಂದಿದೆ ಬಿಜೆಪಿ ಆಪ್ತ ವಲಯದವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಅವರ ಪ್ರಶ್ನೆಗೆ ಉತ್ತರಿಸಿ ಕರ್ನಾಟಕದವರು ಮುಖ್ಯಮಂತ್ರಿಯಾಗುತ್ತಾರೆ ಎಂದಷ್ಟೇ ಹೇಳಿ ಜಾರಿಕೊಂಡಿದ್ದಾರೆ.