ಕರಾವಳಿಭಕ್ತಿಭಾವರಾಜಕೀಯ

ಇಂದು ಮಂಗಳೂರಿನಲ್ಲೇ ಉಳಿದು ಕೊಳ್ಳಲಿರುವ ಸಿ.ಎಂ., ನಾಳೆ ಕೊಲ್ಲೂರಿನ ಮೂಕಾಂಬಿಕಾ ದೇಗುಲಕ್ಕೆ ಭೇಟಿ

319

ನ್ಯೂಸ್ ನಾಟೌಟ್ : ಕರ್ನಾಟಕ ರಾಜ್ಯ ಚುನಾವಣಾ ದಿನಾಂಕ ಸಮೀಪಿಸುತ್ತಿದೆ.ಚುನಾವಣಾ ತಯಾರಿಗಳು ನಡಿತಿವೆ.ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ.ಈ ಹಿನ್ನಲೆಯಲ್ಲಿ ಇಂದು ಕರಾವಳಿಯ ಪ್ರಸಿದ್ದ ಪುಣ್ಯ ಕ್ಷೇತ್ರಗಳಿಗೆ ಸಿ.ಎಂ. ಬೊಮ್ಮಾಯಿ ಅವರು ಭೇಟಿ ನೀಡುತ್ತಿದ್ದಾರೆ.ಈ ಸಂದರ್ಭ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಬೊಮ್ಮಾಯಿ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ಕೃಪೆಗೆ ಪಾತ್ರರಾಗಲಿದ್ದಾರೆ ಹಾಗೂ ದೇವರಿಗೆ ವಿಶೇಷ ಪೂಜೆಯನ್ನು ನೆರವೇರಿಸಿ ನಂತರ ಅಲ್ಲಿಂದ ಮಂಗಳೂರಿಗೆ ತೆರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಇಂದು ರಾತ್ರಿ ಮಂಗಳೂರಿನಲ್ಲಿ ತಂಗಲಿರುವ ಸಿ.ಎಂ ಅವರು ನಾಳೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ದೇವಿಯ ದರ್ಶನವನ್ನು ಪಡೆದು ನಂತರ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.

ಸದ್ಯ ಚುನಾವಣಾ ಕಾವು ರಂಗೇರುತ್ತಿದ್ದು, ರಾಜ್ಯ ರಾಜಕೀಯದ ಬೆಳವಣಿಗೆಯಲ್ಲಿಯೂ ಕುತೂಹಲ ಗರಿಗೆದರಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿಯುತ್ತಿರುವ ಬಸವರಾಜ್ ಬೊಮ್ಮಾಯಿ ಅವರು ದೇವರ ದರ್ಶನವನ್ನು ಪಡೆದು ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.

See also  ಮತದಾರರನ್ನು ಸೆಳೆಯಲು ಹೀಗೊಂದು ಹೊಸ ತಂತ್ರ..! ಕಾಂಡೋಮ್‌ ಪ್ಯಾಕ್‌ಗಳಲ್ಲಿ ರಾಜಕೀಯ ಪಕ್ಷಗಳ ಹೆಸರು..!ವಿಡಿಯೋ ವೈರಲ್..
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget