Latestಕ್ರೈಂವೈರಲ್ ನ್ಯೂಸ್

ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು..! ಗರ್ಭಿಣಿ ತಾಯಿಗೆ ಗಂಭೀರ ಗಾಯ..!

836

ನ್ಯೂಸ್ ನಾಟೌಟ್ : ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.
ಪೃಥ್ವಿರಾಜ್(3) ಮೃತ ಮಗು ಎಂದು ಗುರುತಿಸಲಾಗಿದೆ. ಗರ್ಭಿಣಿ ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿವೆ. ಗರ್ಭಿಣಿ ಮೋನಿಕಾ 15 ದಿನಗಳ ಹಿಂದೆ ಹೆರಿಗೆಗಾಗಿ ತವರು ಮನೆ ಹಾಲಗಾನಹಳ್ಳಿಗೆ ಬಂದಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.

ಭಾನುವಾರ (ಫೆ.23) ಮನೆಯ ಮುಂದೆ ಇದ್ದ ತೆಂಗಿನ ಮರ ಮುರಿದು ಬಿದ್ದಿದೆ. ಪರಿಣಾಮ ಮಗು ಸಾವನ್ನಪ್ಪಿದೆ. ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

See also  ಇಂದು(ಮಾ.29) ಈ ವರ್ಷದ ಮೊದಲ ಸೂರ್ಯ ಗ್ರಹಣ, ಯುಗಾದಿಗೂ ಮೊದಲು ಬಂದ ಸೂರ್ಯ ಗ್ರಹಣದಿಂದ ಧಾರ್ಮಿಕ ಮಹತ್ವ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget