ಕರಾವಳಿಕ್ರೈಂರಾಜ್ಯವೈರಲ್ ನ್ಯೂಸ್

ಹುಡುಗಿ ವಿಚಾರಕ್ಕೆ 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ..! ಬಸ್ ನಿಲ್ದಾಣದಿಂದ ಓಡಿದ ಪ್ರಯಾಣಿಕರು..!

111

ನ್ಯೂಸ್ ನಾಟೌಟ್: ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹುಡುಗಿ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡ ಘಟನೆ ಹಾಸನ ಸಿಟಿ ಬಸ್ ನಿಲ್ದಾಣದಲ್ಲಿ ಇಂದು(ಆ.14) ನಡೆದಿದೆ.

ಸುಮಾರು 20ಕ್ಕೂ ಹೆಚ್ಚು ಯುವಕರಿದ್ದ ಎರಡು‌ ಗುಂಪುಗಳ ನಡುವೆ ಯುವತಿ ವಿಚಾರಕ್ಕೆ ಜಗಳ ಶುರುವಾಗಿದ್ದು, ವಿಕೋಪಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಯುವಕರ ನಡುವೆ ಗಲಾಟೆ ಪ್ರಾರಂಭವಾಗುತ್ತಿದ್ದಂತೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಆತಂಕದಿಂದ ಓಡಿ ಹೋಗಿದ್ದಾರೆ. ಗಲಾಟೆ ನಡೆಯುತ್ತಿದ್ದರೂ ಸಾರಿಗೆ ಬಸ್ ಚಾಲಕರು ಹಾಗೂ ಸಿಬ್ಬಂದಿ ಮೂಕಪ್ರೇಕ್ಷರಾಗಿ‌ ನಿಂತಿದ್ದರು. ಗಲಾಟೆಯಲ್ಲಿ ಕೆಲ ವಿದ್ಯಾರ್ಥಿಗಳ ಬಟ್ಟೆ ಹರಿದು ಹೋಗಿದ್ದರೆ, ಇನ್ನೂ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದು, ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

Click

https://newsnotout.com/2024/08/renuka-swamy-and-darshan-case-pavitra-gowda-issue-another-evidence/
https://newsnotout.com/2024/08/ayodya-main-street-lights-are-theft-by-unkown-and-fir-kananda-news/
See also  ಸುಳ್ಯ: ಎರಡನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
  Ad Widget   Ad Widget   Ad Widget   Ad Widget   Ad Widget   Ad Widget