Latestಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ನಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮ

374

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ನಲ್ಲಿ ಸಂಭ್ರಮದ ಕಾಲೇಜು ವಾರ್ಷಿಕೋತ್ಸವ ಹಾಗೂ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮ ಮಂಗಳವಾರ (ಏ. 29 ) ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಕಲಿಕೆಗೆ ಉತ್ತಮ ಅವಕಾಶವಿದೆ. ಸಂಸ್ಥೆಯಲ್ಲಿ ಆಪರೇಷನ್, ಡಯಾಲಿಸಿಸ್, ಬ್ಲಡ್ ಸೆಂಟರ್, ಎಕ್ಸ್ ರೇ ಹಾಗೂ ಹಲವಾರು ಮಷೀನ್ ಗಳನ್ನು ನೋಡಿ ಕಲಿಯಲು ಅವಕಾಶವಿದೆ. ಹಾಗಾಗಿ ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿಕೊಂಡು ಹೋಗುವಾಗ ಒಬ್ಬ ಸಮರ್ಥವಾಗಿ ಕೆಲಸ ನಿಭಾಯಿಸಿಕೊಂಡು ಹೋಗಲು ತಯಾರಾಗುತ್ತಾರೆ ಎಂದರು.

ಮುಖ್ಯ ಅತಿಥಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿಶೇಷ ಆರೈಕೆ ವಿಭಾಗದ ಆಡಳಿತಾಧಿಕಾರಿ ಡಾ. ಪ್ರಮೋದ್ ಕೆ ಜೆ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಇದರ ಪ್ರಾಂಶುಪಾಲರು ಬಿ ಎಮ್ ಪ್ರೇಮ, ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಇದರ ಪ್ರಾಂಶುಪಾಲರು ಚಂದ್ರಾವತಿ, ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಲ್ಯಾಂಪ್ ಲೈಟಿಂಗ್ ಹಾಗೂ ಕ್ಯಾಪಿಂಗ್ ಕಾರ್ಯಕ್ರಮ ನಡೆಯಿತು.

ಬಿ.ಎಸ್ಸಿ ವಿದ್ಯಾರ್ಥಿನಿ ರೇಣುಕಾ ಪ್ರಾರ್ಥಿಸಿದರು ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನ ಪ್ರೊಫೆಸರ್ ಶಿಲ್ಪಾ ಎನ್ ಎಂ. ಸ್ವಾಗತಿಸಿದರು, ಚಂದ್ರಾವತಿ ಇವರು ಪ್ರಮಾಣ ವಚನ ಬೋಧಿಸಿದರು, ಬಿ ಎಮ್ ಪ್ರೇಮ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕರಾದ ಲವೀನಾ ಕೆ.ಎ. ಅತಿಥಿಗಳನ್ನು ಪರಿಚಯಿಸಿದರು, ಜಿಮ್ಸಿ ಜಾನ್ ವಂದಿಸಿದರು. ವಿದ್ಯಾರ್ಥಿನಿ ಮಾಳವಿಕ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ವೈಭವ ನೆರವೇರಿತು.

See also  ರೀಲ್ಸ್‌ ಗಾಗಿ ನಡು ರಸ್ತೆಯಲ್ಲಿ ಟೀ ಕುಡಿಯುತ್ತಾ ವ್ಯಕ್ತಿಯ ಹುಚ್ಚಾಟ..! ವಿಡಿಯೋ ವೈರಲ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget