ಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಅಪ್ರಾಪ್ತ..! ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದಿದ್ದ ಬಾಲಕ..!

249

ನ್ಯೂಸ್ ನಾಟೌಟ್: ಮಂಗಳೂರಿನ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 17 ವರ್ಷದ ಅಪ್ರಾಪ್ತ ಬಾಲಕನೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಣಿಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶೀಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು ಎನ್ನಲಾಗಿದೆ. ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

See also  ಚಲಿಸೋ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ..! ರೈಲ್ವೇ ಅಧಿಕಾರಿಗಳ ಕ್ರಮಕ್ಕೆ ಎಲ್ಲೆಡೆ ಶ್ಲಾಘನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget