ನ್ಯೂಸ್ ನಾಟೌಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಸುಳ್ಯ ತಾಲೂಕಿನ ಗೂನಡ್ಕದ ತೆಕ್ಕಿಲ್ ಶಾಲೆಯ ಸಮೀಪ ಬೈಕ್ ವೊಂದು ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದಾರೆ. ಅವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡಿಸೆಂಬರ್ 8ರಂದು ಸಂಜೆ ಘಟನೆ ಸಂಭವಿಸಿದೆ. ಗಾಯಾಳುವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಣ್ಣೀನ ಸಮೀಪ ಗಾಯವೊಂದನ್ನು ಬಿಟ್ಟರೆ ಉಳಿದಂತೆ ತರಚಿದ ಗಾಯಗಳಾಗಿವೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಸವಾರ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.