ಸುಳ್ಯ

ಸುಳ್ಯ ನೆಹರೂ ಮೆಮೊರಿಯಲ್ ಕಾಲೇಜಿನ ನೇಚರ್ ಕ್ಲಬ್‌ನ ವಾರ್ಷಿಕ ಚಟುವಟಿಕೆಗಳ ಸಮಾರೋಪ

180

ನ್ಯೂಸ್‌ ನಾಟೌಟ್‌: ಸುಳ್ಯ ನೆಹರೂ ಮೆಮೊರಿಯಲ್ ಕಾಲೇಜಿನ ನೇಚರ್ ಕ್ಲಬ್‌ನ 2022-23ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು.

ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪ ಕಾಣಿಯೂರು ಸಮಾರಂಭ ಉದ್ಘಾಟಿಸಿ ಮಾತನಾಡಿ, ಪದವಿಯಲ್ಲಿ ಜೀವವಿಜ್ಞಾನ ಕಲಿಕೆ ಜೀವನ ಪಾಠವನ್ನೂ ಕಲಿಯುವ ಅವಕಾಶ ನೀಡಿದೆ. ಶಿಕ್ಷಣದ ಜತೆಗೆ ಜೀವನ ಕಲೆ ಕಲಿಯುವುದು ಮುಖ್ಯ. ವಿದ್ಯಾರ್ಥಿಗಳು ಹೇಗೆ ಸಂಪತ್ತೀಕರಣಗೊಳ್ಳಬಹುದು, ಗುರುಗಳ ಮಾರ್ಗದರ್ಶನದೊಂದಿಗೆ ನಿಷ್ಠೆ, ಶ್ರದ್ಧೆಯಿಂದ ತನ್ನೊಳಗಿನ ಶಕ್ತಿಯನ್ನು ಅರಿತುಕೊಂಡು ನಾಯಕರಾಗಲು ಹೇಗೆ ಸಾಧ್ಯ ಎಂಬುದನ್ನು ವಿವರಿಸಿದರು. ನೇಚರ್ ಕ್ಲಬ್‌ನ ವಿವಿಧ ಚಟುವಟಿಕೆಗಳ ಜತೆಗೆ ಅವರ ಭಾಗವಹಿಸುವಿಕೆಯನ್ನು ನೆನಪಿಸಿಕೊಂಡರು.

ಕಾಲೇಜಿನ ಶೈಕ್ಷಣಿಕ ಸಲಹೆಗಾರ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ಬೀಳ್ಕೊಡುವ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ.ಅಧ್ಯಕ್ಷತೆ ವಹಿಸಿದ್ದರು.

ನೇಚರ್ ಕ್ಲಬ್ ಸಂಯೋಜಕ ಮತ್ತು ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಕುಲದೀಪ್ ಪೆಲ್ತಡ್ಕ ಪ್ರಾಸ್ತಾವಿಕ ಮಾತನಾಡಿ, ಕ್ಲಬ್‌ನ ಕಾರ್ಯದರ್ಶಿ ಶ್ರೇಯಾ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮೊಹಮ್ಮದ್ ಹಾಶಿಮ್ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಉಳಿಕೆಯನ್ನು ಕಿರಿಯ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ನೇಚರ್ ಕ್ಲಬ್ ಸದಸ್ಯರಾದ ಪವಿತ್ರಾಕ್ಷಿ, ಯಶಿಕಾ ಮತ್ತು ತಂಡದವರು ಪ್ರಾರ್ಥಿಸಿ, ಕ್ಲಬ್‌ನ ಜತೆ ಕಾರ್ಯದರ್ಶಿ ಮಹಿಮಾ ಸ್ವಾಗತಿಸಿದರು. ಜ್ಯೋತಿ ಮುಖ್ಯ ಅತಿಥಿಗಳನ್ನು ಪರಿಚಯಿಸಿ, ತನುಷ್ ವಂದಿಸಿದರು. ಕೀರ್ತಿಕಾ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ಜೀವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ದ್ವಿತೀಯ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳು ವಿವಿಧ ಮನರಂಜನಾ ಸ್ಪರ್ಧೆ ಚಟುವಟಿಕೆಗಳನ್ನು ಆಯೋಜಿಸಿದ್ದರು. ಬೀಳ್ಕೊಡುತ್ತಿರುವ ವಿದ್ಯಾರ್ಥಿಗಳು ಅವರ ಸವಿನೆನಪಿನ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಯಶಸ್ಸಿಗೆ ಉಪನ್ಯಾಸಕರಾದ ಕೃತಿಕಾ, ಭವ್ಯ, ವಿಷ್ಣುಪ್ರಶಾಂತ್ ಮತ್ತು ಅಜಿತ್ ಕುಮಾರ್ ಹಾಗೂ ಸಿಬ್ಬಂದಿಯಾದ ಜಯಂತಿ, ಭವ್ಯ, ಲತಾ, ಗೀತಾ ಮತ್ತು ಪವನ್ ಹಾಗೂ ಎಲ್ಲ ವಿದ್ಯಾರ್ಥಿಗಳು ಸಹಕರಿಸಿದರು.

See also  ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ,ಕಾಂತಾರ ನಟ ರಿಷಬ್‌ಗೆ ಕಂಬಳ ತರಬೇತಿ ನೀಡಿದ ಪರಮೇಶ್ವರ್ ಭಟ್ ಉಪಸ್ಥಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget