ಕ್ರೈಂರಾಜಕೀಯ

ಬಿಜೆಪಿ ಶಾಸಕನಿಂದ ಕಾಂಗ್ರೆಸ್ ಅಭ್ಯರ್ಥಿಗೆ ಮತ..! ಎಸ್​ಟಿ ಸೋಮಶೇಖರ್ ವಿರುದ್ಧ ಕಾನೂನು ಕ್ರಮ..!

204

ನ್ಯೂಸ್ ನಾಟೌಟ್: ಶಾಸಕ ಎಸ್​ಟಿ ಸೋಮಶೇಖರ್ ಅಡ್ಡಮತದಾನದ ಕುರಿತು ಅರವಿಂದ್ ಬೆಲ್ಲದ್ ಮಾತನಾಡಿದ್ದು, ಹಲವು ಸಂಗತಿಗಳನ್ನು ತಿಳಿಸಿದ್ದಾರೆ. ಸೋಮಶೇಖರ್ ಬಿಜೆಪಿ ಅಭ್ಯರ್ಥಿಗಳ ಬದಲು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ. ಮತ ಹಾಕುವಾಗ ಬ್ಯಾಲೆಟ್ ಪೇಪರ್ ನನಗೆ ತೋರಿಸಿದರು. ಅವಾಗ ನಾನು ಅದನ್ನು ಪ್ರಶ್ನೆ ಮಾಡಿದೆ. ವಿಪ್ ಜಾರಿದ ಬಳಿಕವೂ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದರು ಎಂದು ಹೇಳಿದರು.

ನನಗೆ ತೋರಿಸಿ ಕಾಂಗ್ರೆಸ್ ಪಕ್ಷದ ಮೂರು ಅಭ್ಯರ್ಥಿಗಳಿಗೆ ಮತ ಹಾಕಿದರು. ಈಗಾಗಲೇ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ವಿರುದ್ಧ ಕಾನೂನು ಕ್ರಮಕ್ಕೆ ತೀರ್ಮಾನ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಶಿವರಾಂ ಹೆಬ್ಬಾರ್ ಹಾಗೂ ಎಸ್​​ಟಿ ಸೋಮಶೇಖರ್ ನಂಬಿಸಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದು, ಇನ್ನು ಅಡ್ಡಮತದಾನದ ಮಾಹಿತಿ ಹೊರ ಬೀಳುತ್ತಿದ್ದಂತೆ ರಾಜಧಾನಿಯಲ್ಲಿ ಶಾಸಕ ಎಸ್​ಟಿ ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದರು.

ಸೋಮಶೇಖರ್ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇನ್ನು ಮತ್ತೋರ್ವ ಬಿಜೆಪಿ ಎಂಎಲ್ಎ ಶಿವರಾಂ ಹೆಬ್ಬಾರ್, ಬೆಂಗಳೂರಿನ ಶಾಸಕರ ಭವನದಲ್ಲಿಯೇ ಇದ್ದರೂ ಮತದಾನಕ್ಕೆ ಗೈರಾಗುವ ಮೂಲಕ ಪಕ್ಷಕ್ಕೆ ಶಾಕ್ ನೀಡಿದರು. ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಅಜಯ್ ಮಕೇನ್, ಸಯ್ಯದ್ ನಾಸೀರ್ ಹುಸೇನ್ ಮತ್ತು ಜಿಸಿ ಚಂದ್ರಶೇಖರ್ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಇತ್ತ ಬಿಜೆಪಿಯ ನಾರಾಯಣ ಬಾಂಡಗೆ ಸಹ ಗೆಲುವನ್ನು ಕಂಡಿದ್ದಾರೆ. ಅಡ್ಡ ಮತದಾನ ಮಾಡಿದ್ದಾರೆ ಎನ್ನಲಾದ ಎಸ್‌.ಟಿ ಸೋಮಶೇಖರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ. ಶಿವರಾಂ ಹೆಬ್ಬಾರ್‌ರನ್ನು ಅನರ್ಹ ಮಾಡುವಂತೆ ಸ್ಪೀಕರ್‌ಗೆ ದೂರು ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸುನಿಲ್‌ ಕುಮಾರ್‌ ಸಮಾಲೋಚನೆ ನಡೆಸಿದ್ದಾರೆ.

See also  ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಕಾರು-ಸ್ಕೂಟಿ ಅಪಘಾತ, ಸ್ಕೂಟಿ ಸವಾರನಿಗೆ ಗಾಯ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget