ಕರಾವಳಿ

ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ,ಉಡುಪಿಯಲ್ಲಿ ವೀರಪ್ಪ ಮೊಯ್ಲಿ ಸ್ಪಷ್ಟನೆ

279

ನ್ಯೂಸ್ ನಾಟೌಟ್:ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ರಾಜಕೀಯ ಪಕ್ಷಗಳು ಇದೀಗ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಚರ್ಚೆಯಲ್ಲಿ ತೊಡಗಿವೆ.ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ವಿಚಾರ ಕೈ ನಾಯಕರಿಗೆ ಇದೀಗ ತಲೆನೋವಾಗಿ ಪರಿಣಮಿಸಿದೆ. ರಾಜ್ಯದಲ್ಲೀಗ ಈ ವಿಚಾರ ಭಾರೀ ಸಂಚಲನವನ್ನೇ ಉಂಟು ಮಾಡಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಭಜರಂಗದಳ ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇಂದು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾವು ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.

See also  ಮೀನಿಗೆ ಬಲೆ ಹಾಕುತ್ತಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ಸಾವು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget