ಕರಾವಳಿಬೆಂಗಳೂರುರಾಜಕೀಯ

ಹಲವು ಭರವಸೆಗಳನ್ನು ಒಳಗೊಂಡ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

ನ್ಯೂಸ್‌ ನಾಟೌಟ್‌: ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್‌ ಇನ್ನೂ ಹತ್ತು ಹಲವು ಭರವಸೆಗಳನ್ನು ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಗ್ದಾನಗಳ ಪಟ್ಟಿ ಬಿಡುಗಡೆಗೊಂಡಿದೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮಲೆನಾಡು ಪ್ರದೇಶ ಹಾಗೂ ಬೆಂಗಳೂರು ನಗರಗಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆಯಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆಗೊಳಿಸಿದರು.

ಐದು ಗ್ಯಾರಂಟಿ ಯೋಜನೆ ಪ್ರಕಟ:

ಈಗಾಗಲೇ ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ‘ಗೃಹ ಜ್ಯೋತಿ’, ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಮಾಸಿಕ ಸಹಾಯ ಧನ ನೀಡುವ ‘ಗೃಹ ಲಕ್ಷ್ಮೀ’, ಪದವೀಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡುವ ‘ಯುವ ನಿಧಿ’, ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುವ ‘ಅನ್ನಭಾಗ್ಯ’, ಮಹಿಳೆಯರಿಗೆ ಉಚಿತ ಪ್ರಯಾಣದ ‘ಸಖಿ’ ಭರವಸೆ ಸೇರಿದಂತೆ ಐದು ಗ್ಯಾರಂಟಿ ಯೋಜನೆ ಪ್ರಕಟಿಸಲಾಗಿದೆ. ಇವುಗಳ ಜತೆಯಲ್ಲಿ ಪೌರ ಕಾರ್ಮಿಕರ ಹುದ್ದೆ ಕಾಯಂ, ಹಳೆ ಪಿಂಚಣಿ ಮರು ಜಾರಿ ಸೇರಿದಂತೆ ಹಲವು ಮಹತ್ವದ ಅಂಶಗಳನ್ನು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಣಾಳಿಕೆ ಬಿಡುಗಡೆಗೆ ಸಾಂಸ್ಕೃತಿಕ ಟಚ್ ನೀಡಲಾಗಿದೆ. ವೀಳ್ಯದೆಲೆ ಅಡಕೆ, ಅರಿಶಿನ, ಕುಂಕುಮ ಇಟ್ಟು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪ್ರಣಾಳಿಕೆ ಪುಸ್ತಕಕ್ಕೆ ಕನ್ನಡದ ಬಾವುಟದ ಬಣ್ಣ ಹಚ್ಚಲಾಗಿದೆ.

ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್​ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜನರ ಜತೆ ಚರ್ಚಿಸಿದ ಬಳಿಕ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಬೆಂಗಳೂರಿನ ಸಮಸ್ಯೆಗಳ ಗುರುತಿಸಲು ಅನೇಕ ಸಂಸ್ಥೆಗಳ ಸಲಹೆ ಪಡೆದಿದ್ದೇವೆ. ನಮ್ಮ ಮುಖಂಡರ ಜತೆಗೂ ಚರ್ಚಿಸಿ ಪ್ರಣಾಳಿಕೆ ತಯಾರಿಸಿದ್ದೇವೆ. ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ’ ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಪ್ರಣಾಳಿಕೆ ತಯಾರಿ ಮಾಡಿದ್ದೇವೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, CLP ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​, ಡಾ.ಜಿ.ಪರಮೇಶ್ವರ್​ ಉಪಸ್ಥಿತರಿದ್ದರು.

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​

ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ

ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.

ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು

ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.

ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಖಾಯಂ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ

ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ

ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ

ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ

ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ

ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ

ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ

ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ

ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ

ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ

Related posts

ಸುಳ್ಯ: ಪೊಲೀಸರಿಗೆ ವಿಶೇಷ ತರಬೇತಿ ಶಿಬಿರ,70ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ,ಅಧಿಕಾರಿಗಳು ಭಾಗಿ

ಮಂಗಳೂರು ಆಕಾಶವಾಣಿಯಲ್ಲಿ ಸುಳ್ಯದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರ ಭಾಷಣ

ಇಂದು ಸಂಜೆಯಿಂದ ಮೂರು ದಿನ ಮದ್ಯದಂಗಡಿ ಬಂದ್