ನ್ಯೂಸ್ ನಾಟೌಟ್: ನೂತನವಾಗಿ ಆಯ್ಕೆಯಾದ ಮೂವರು ಕಾಂಗ್ರೆಸ್ ಶಾಸಕರು ಇಂದು(ಡಿ.9) ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾದ ಬೆನ್ನಲ್ಲೇ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದ ಇ ಅನ್ನಪೂರ್ಣ, ಯಾಸೀರ್ ಅಹಮದ್ ಖಾನ್ ಪಠಾಣ್ ಮತ್ತು ಸಿ ಪಿ ಯೋಗೀಶ್ವರ್ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಯೋಗೀಶ್ವರ ಅವರು ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು.