ಕರಾವಳಿಪುತ್ತೂರುಸುಳ್ಯ

ಪುತ್ತೂರಿನಿಂದ ಉದ್ಯಮಿ ಅಶೋಕ್ ಕುಮಾರ್ ರೈಗೆ ಕಾಂಗ್ರೆಸ್‌ ಟಿಕೆಟ್‌?

393

ನ್ಯೂಸ್‌ನಾಟೌಟ್‌: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಹೆಸರು ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ಪುತ್ತೂರಿನಿಂದ ಕಾಂಗ್ರೆಸ್‌ ಟಿಕೆಟ್‌ಗಾಗಿ 14 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇದೀಗ ಮೂವರ ಹೆಸರು ಅಂತಿಮ ಚರ್ಚೆಯಲ್ಲಿದ್ದು, ಅದರಲ್ಲಿ ಅಶೋಕ್ ಕುಮಾರ್ ರೈ ಹೆಸರು ಎಐಸಿಸಿಗೆ ರವಾನೆಯಾಗಿ ಅಂತಿಮಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉದ್ಯಮಿ ಅಶೋಕ್ ಕುಮಾರ್ ರೈಯವರು ಬಿಜೆಪಿಯಲ್ಲಿ 20 ವರ್ಷಗಳ ಕಾಲ ತೊಡಗಿಸಿಕೊಂಡಿದ್ದರು. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

See also  ಸುಳ್ಯ: ಬಿದ್ದು ಸಿಕ್ಕಿದ ಮೊಬೈಲನ್ನು ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget