ರಾಜಕೀಯ

‘ಸಂವಿಧಾನ ಇಲ್ಲದಿದ್ರೆ ನಾನು, ಸಿ.ಟಿ. ರವಿ, ಈಶ್ವರಪ್ಪ ಕುರಿ ಕಾಯಬೇಕಿತ್ತು’ CM ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

296

ನ್ಯೂಸ್ ನಾಟೌಟ್: ನಾನಿಂದು ಶಾಸಕ, ಮುಖ್ಯಮಂತ್ರಿಯಾಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ನೆಲಮಂಗಲದ ಎಸ್‌ಡಿಎಂ ಕ್ಷೇಮವನದಲ್ಲಿ 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಶಾಸಕರಿಗೆ ಹಮ್ಮಿಕೊಂಡಿದ್ದ ಪುನಶ್ಚೇತನ ತರಬೇತಿ ಶಿಬಿರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ‘ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಸಹ ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ದೇಶದ ಪ್ರತಿಯೊಬ್ಬರು ಸಂವಿಧಾನದ ಮೌಲ್ಯ ಅರಿತುಕೊಳ್ಳಬೇಕು’ ಎಂದಿದ್ದಾರೆ ‘ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ.

ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿಯನ್ನು ಪ್ರತಿಯೊಬ್ಬ ಶಾಸಕ ಬೆಳೆಸಿಕೊಳ್ಳಬೇಕು. ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ನಾನು ಮೊದಲ ಬಾರಿ ಹಣಕಾಸು ಸಚಿವನಾದಾಗ ‘ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾನೆ?’ ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ ನಿರಂತರ ವಿಷಯ ತಜ್ಞರ ಜತೆ ಚರ್ಚಿಸಿ ಬಜೆಟ್ ಮಂಡಿಸಿದೆ. ಮರುದಿನ ‘ದಿ ಹಿಂದೂ’ ಪತ್ರಿಕೆ ನನ್ನ ಬಜೆಟ್ ಅನ್ನು ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಹೀಗಾಗಿ ಜ್ಞಾನ ದಾಹ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಂಡರೆ ಸವಾಲನ್ನು ಗೆದ್ದು ಏನನ್ನಾದರೂ ಸಾಧಿಸಬಹುದು ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
‘ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮಬದ್ಧವಾಗಿ ಸದನದ ಮುಂದೆ ಮಂಡಿಸಬಹುದು. ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ’ ಎಂದಿದ್ದಾರೆ.

See also  ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ,ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget