Latestದಕ್ಷಿಣ ಕನ್ನಡಮಂಗಳೂರು

ಮಂಗಳೂರಿನ ಬಾವುಟಗುಡ್ಡೆಯಲ್ಲಿ ದ.ಕ. ಜಿಲ್ಲೆಯ ಅತೀ ದೊಡ್ಡ ಧ್ವಜಸ್ತಂಭ ನಿರ್ಮಾಣ! ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ ಸಂಸ್ಮರಣಾ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

174

ನ್ಯೂಸ್‌ ನಾಟೌಟ್:ಮಂಗಳೂರಿನ ಬಾವುಟಗುಡ್ಡೆಯಲ್ಲಿ ಏ.5ರಂದು ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪನಮನ ಕಾರ್ಯಕ್ರಮ ನೆರವೇರಿತು.ಈ ವೇಳೆ ಮಾತನಾಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಬಾವುಟಗುಡ್ಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಧ್ವಜಸ್ತಂಭವನ್ನು ನಿರ್ಮಾಣ ಮಾಡಲಾಗುವುದು. ಸುಮಾರು 100 ಅಡಿಗೂ ಹೆಚ್ಚಿನ ಎತ್ತರದ ಧ್ವಜಸ್ತಂಭ ನಿರ್ಮಾಣ ಮಾಡುವ ಮೂಲಕ ದೇಶಪ್ರೇಮ ಪ್ರೇರೇಪಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. ವೀರರ ಸ್ಮರಣೆ ಮಾಡುವ ಮೂಲಕ ನಮ್ಮ ದೇಶದ ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ವೀರರ ತ್ಯಾಗ ಬಲಿದಾನವನ್ನು ಮರೆಯಬಾರದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಅಧ್ಯಕ್ಷತೆಯನ್ನುಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್‌ ವಹಿಸಿದ್ದರು. ಬಳಿಕ ಮಾತನಾಡಿದ ಅವರು, ಕೆದಂಬಾಡಿ ರಾಮಯ್ಯ ಗೌಡರ ಹೋರಾಟವನ್ನು ಪಠ್ಯದ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸ ಆಗಬೇಕು. ಇದುವೇ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು, ಇತಿಹಾಸದಲ್ಲಿ ಇದನ್ನು ಸೇರಿಸಬೇಕು ಎಂದರು.

 

ಈ ವೇಳೆ ಕಾವೂರು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ವಿಧಾನಪರಿಷತ್ತು ಸದಸ್ಯ ಮಂಜುನಾಥ ಭಂಡಾರಿ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷ ಭರತ್‌ ಮುಂಡಾಡಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಪಾಲಿಕೆ ಮಾಜಿ ಸದಸ್ಯರಾದ ಎ.ಸಿ.ವಿನಯರಾಜ್, ಪ್ರವೀಣ್ ಚಂದ್ರ ಆಳ್ವ, ಅನಿಲ್‌ ಕುಮಾರ್‌, ದ.ಕ. ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಕುಮಾರ್‌, ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ ಅಧ್ಯಕ್ಷ ಕಿರಣ್ ಗುಡ್ಲೆಗುತ್ತು, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿಜೆಪ್ಪು, ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ., ಪ್ರಮುಖರಾದ ಸುರೇಶ್‌ ಬಜಾಲ್, ಪೂರ್ಣಿಮಾ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ ಮತ್ತಿತರರಿದ್ದರು. ವಿಜಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಮಂಗಳೂರು ಮತ್ತು ತುಳುನಾಡ ರಕ್ಷಣಾ ವೇದಿಕೆಯ ಮಂಗಳೂರು ಇದರ ಸಹಭಾಗಿತ್ವದಲ್ಲಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.ವಿಜೇತರಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.

See also  ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು..! ಗರ್ಭಿಣಿ ತಾಯಿಗೆ ಗಂಭೀರ ಗಾಯ..!
  Ad Widget   Ad Widget   Ad Widget   Ad Widget   Ad Widget   Ad Widget