ಕರಾವಳಿಕ್ರೈಂವೈರಲ್ ನ್ಯೂಸ್

ಬಂಟ್ವಾಳ: ಕಂಟೈನರ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ..! ಶಾಲಾ ಮಕ್ಕಳೇ ಹೆಚ್ಚಿದ್ದ ಬಸ್ ಜಖಂ..!

227

ನ್ಯೂಸ್‌ ನಾಟೌಟ್‌ : ಕಂಟೈನರ್ ಲಾರಿ ಮತ್ತು ಖಾಸಗಿ ಬಸ್ಸೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯ ವೈದ್ಯನಾಥ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಬೆಳಗ್ಗೆ(ಮಾರ್ಚ್ 9) ನಡೆದಿದೆ.

ಬಿ.ಸಿ.ರೋಡಿನಿಂದ ಮೂಡುಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೈನರ್ ಹಾಗೂ ಮೂಡುಬಿದಿರೆಯಿಂದ ಬಂಟ್ವಾಳದತ್ತ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಗಾಯಾಳು ಲಾರಿ ಚಾಲಕನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ ಎಂದು ವರದಿ ತಿಳಿಸಿದೆ.

ಉಳಿದಂತೆ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

See also  ನಿಮ್ಮೂರಲ್ಲಿ ಅಗ್ನಿ ದುರಂತ ಸಂಭವಿಸಿದರೆ ಈ ನಂಬರ್ ಗೆ ಕಾಲ್ ಮಾಡಿ
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget