Latestಕ್ರೈಂರಾಜಕೀಯವಿಡಿಯೋವೈರಲ್ ನ್ಯೂಸ್

ಬಲವಂತದ ಮತಾಂತರಕ್ಕೆ ಮರಣದಂಡನೆ ವಿಧಿಸುವ ಕಾನೂನು ತರುವುದಾಗಿ ಘೋಷಿಸಿದ ಮಧ್ಯಪ್ರದೇಶ ಸಿಎಂ..! ವಿವಾದ ಸೃಷ್ಟಿಸಿದ ಸಿಎಂ ವಿಡಿಯೋ

275
Spread the love

ನ್ಯೂಸ್ ನಾಟೌಟ್: ಅಪ್ರಾಪ್ತ ವಯಸ್ಸಿನ ಬಾಲಕಿಯರ ಬಲವಂತದ ಮತಾಂತರಕ್ಕೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಹೇಗೆ ಮರಣದಂಡನೆ ಶಿಕ್ಷೆಯ ಕಾನೂನು ಇರುವಂತೆಯೇ ಬಲವಂತದ ಧಾರ್ಮಿಕ ಮತಾಂತರಕ್ಕೂ ಮರಣದಂಡನೆ ವಿಧಿಸುವುದಾಗಿ ಘೋಷಿಸಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಭೋಪಾಲ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು, ಪ್ರತಿಪಕ್ಷ ಕಾಂಗ್ರೆಸ್​ನಿಂದ ಆಕ್ಷೇಪವೂ ವ್ಯಕ್ತವಾಗಿದೆ. ಮುಗ್ಧ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರ ವಿರುದ್ಧ ಸರ್ಕಾರವು ತುಂಬಾ ಕಟ್ಟುನಿಟ್ಟಾಗಿದೆ. ಅಂತಹವರಿಗೆ ಮುಂದೆ ಮರಣದಂಡನೆ ವಿಧಿಸಲಾಗುತ್ತದೆ. ಬಲವಂತದ ಧಾರ್ಮಿಕ ಮತಾಂತರಕ್ಕೆ ಮರಣದಂಡನೆ ವಿಧಿಸಲು ಅವಕಾಶ ಕಲ್ಪಿಸಿ ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು. ಕಾನೂನುಬಾಹಿರ ಮತಾಂತರದಲ್ಲಿ ತೊಡಗುವವರನ್ನು ರಾಜ್ಯ ಸರ್ಕಾರ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಸರ್ಕಾರವು ಬಲವಂತದ ಧಾರ್ಮಿಕ ಮತಾಂತರದ ತಪ್ಪುಗಳು ಮತ್ತು ಅಂತಹ ದುಷ್ಕೃತ್ಯಗಳನ್ನು ಹೆಚ್ಚು ಕಟ್ಟುನಿಟ್ಟಾಗಿ ಎದುರಿಸಲಿದೆ ಎಂದು ಮೋಹನ್ ಯಾದವ್ ಫೇಸ್‌ಬುಕ್ ಪೋಸ್ಟ್‌ ನಲ್ಲಿಯೂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಿಎಂ ಯಾದವ್ ಘೋಷಣೆಯ ಬಗ್ಗೆ ಕಾಂಗ್ರೆಸ್ ನಾಯಕ ಆರಿಫ್ ಮಸೂದ್ ಕಳವಳ ವ್ಯಕ್ತಪಡಿಸಿದ್ದು, ಬಲವಂತದ ಧಾರ್ಮಿಕ ಮತಾಂತರದ ಅರ್ಥವೇನೆಂದು ಮೊದಲು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದ್ದಾರೆ.

See also  ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು
  Ad Widget   Ad Widget   Ad Widget