Latestರಾಜಕೀಯರಾಜ್ಯ

ಸಹಕಾರ ಸಚಿವ ರಾಜಣ್ಣ ದಿಢೀರ್‌ ರಾಜೀನಾಮೆ..! ಮತಕಳ್ಳತನ ಆರೋಪದ ಪ್ರತಿಕ್ರಿಯೆಗೆ ಹೈಕಮಾಂಡ್‌ ಕ್ರಮ..?

568

ನ್ಯೂಸ್ ನಾಟೌಟ್ : ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸಹಕಾರ ಸಚಿವ ಕೆ,.ಎನ್‌ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ಸೋಮವಾರ‌ (ಆ.11) ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಕೆ.ಎನ್‌.ರಾಜಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮಾಡಿದ್ದ ಮತಕಳ್ಳತನ ಆರೋಪದ ವಿಚಾರದಲ್ಲಿ ರಾಜಣ್ಣ ಅವರು ಪಕ್ಷದ ವಿರುದ್ಧದವೇ ಮಾತನಾಡಿದ್ದರು. “ಮತ ಕಳ್ಳತನ ನಡೆದಿರುವುದು ನಿಜ. ಆದರೆ ನಾವು ಮೊದಲು ನೋಡಿಕೊಳ್ಳದೆ ಈಗ ಹೇಳುತ್ತಿರುವುದು ನಮಗೆ ನಾಚಿಕೆಯಾಗಬೇಕು. ನಮ್ಮದೇ ಸರ್ಕಾರ ಇದ್ದಾಗ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ದರಾ ಎಂದು ಮಧುಗಿರಿ ಶಾಸಕ ತಮ್ಮದೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆ ಕಾಂಗ್ರೆಸ್‌ ಹೈಕಮಾಂಡ್‌ ಕಣ್ಣು ಕೆಂಪಗಾಗಿಸಿತ್ತು ಎನ್ನಲಾಗಿದೆ. ಹೈಕಮಾಂಡ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ರಾಜಣ್ಣರಿಂದ ರಾಜೀನಾಮೆ ಪಡೆಯುವಂತೆ ಸೂಚನೆ ನೀಡಿತ್ತು ಎನ್ನಲಾಗಿದೆ.

See also  ಭಕ್ತರ ವೇಷದಲ್ಲಿ ಮಠಕ್ಕೆ ಬಂದು ಚಿನ್ನ, ಹಣ ದೋಚಿದ ಕಳ್ಳರು..! ಪಿಸ್ತೂಲ್‌ ಹಿಡಿದು ಬೆದರಿಕೆ ಹಾಕಿದ್ದಾರೆ ಎಂದ ಸ್ವಾಮೀಜಿ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget