ಕರಾವಳಿ

ಲಂಚ ಪಡೆದಿದ್ದ ಮಹಾನಗರ ಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು, 35 ಲಕ್ಷ ರೂ. ದಂಡ

1k

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯೊಬ್ಬರು ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.

ಮಂಗಳೂರು ಮನಪಾ ಸಹಾಯಕ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಬಗ್ಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ.ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

See also  ವಿ.ಸುನೀಲ್ ಕುಮಾರ್ ಮತ್ತು ಸ್ವರ್ಣ ಕಾರ್ಕಳದ ಕನಸು...
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget