ಕ್ರೈಂಬೆಂಗಳೂರುರಾಜ್ಯವೈರಲ್ ನ್ಯೂಸ್

ನ್ಯಾಯಾಂಗ ಬಂಧನದ ಅವಧಿ ಇಂದು(ಆ.1) ಅಂತ್ಯ..! ಮತ್ತೆ ದರ್ಶನ್‌ ನನ್ನು ಜೈಲಿಗೆ ಕಳುಹಿಸಲು SIT ಸಕಲ ಸಿದ್ಧತೆ..!

219

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಕಸ್ಟಡಿ ಇಂದಿಗೆ(ಜು.01) ಅಂತ್ಯವಾಗಲಿದೆ.

ಪ್ರಕರಣದ ಎಲ್ಲಾ ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಿದ್ದು SIT ಪೊಲೀಸರು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್‌ಗೆ (Karnataka Highcourt) ಮನವಿ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲು ಸಿದ್ಧತೆ ನಡೆದಿದೆ.

ರೇಣುಕಾಸ್ವಾಮಿ ಕೊಲೆ ಸಂಬಂಧ ನಟ ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಪುನಃ ನ್ಯಾಯಾಂಗ ಬಂಧನ ವಿಸ್ತರಣೆಗೆ ಮನವಿ ಮಾಡಲು ರಿಮ್ಯಾಂಡ್‌ ಅರ್ಜಿಯನ್ನೂ ತಯಾರು ಮಾಡಿಕೊಂಡಿದ್ದಾರೆ. ನ್ಯಾಯಾಂಗ ಬಂಧನ ವಿಸ್ತರಣೆಗೆ 10ಕ್ಕೂ ಹೆಚ್ಚು ಅಂಶಗಳ ರಿಮ್ಯಾಂಡ್ ಅಪ್ಲಿಕೇಷನ್ ತಯಾರಿ ಮಾಡಲಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸರು ಕೋರ್ಟ್‌ಗೆ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಕೆ‌ ಮಾಡಲಿದ್ದಾರೆ.

Click

https://newsnotout.com/2024/08/cyclinder-lpg-kannada-news-price-hike-kannada-news-viral-mews/
See also  ಮನೆಗೆ ಬಂದು ಡಿಸಿಎಂ ಡಿಕೆಶಿಗೆ ಬೆಳ್ಳಿ ಕಿರೀಟ ತೊಡಿಸಿದ ಸ್ವಾಮೀಜಿ..! ಕುತೂಹಲ ಮೂಡಿಸಿದ ಸ್ವಾಮೀಜಿ ನಡೆ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget