ಕ್ರೈಂವೈರಲ್ ನ್ಯೂಸ್

ನ್ಯಾಯಾಲಯದ ತೀರ್ಪನ್ನೇ ತಿದ್ದಿದ್ದೇಕೆ ಸ್ವಾಮೀಜಿ..? ಸ್ವಾಮಿಜಿ ವಿರುದ್ಧ ಕ್ರಿಮಿನಲ್‌ ಕೇಸ್ ಗೆ ಆದೇಶಿಸಿದ ಜಿಲ್ಲಾಧಿಕಾರಿ! ಯಾರು ಆ ಸ್ವಾಮೀಜಿ?

292

ನ್ಯೂಸ್ ನಾಟೌಟ್: ಬೀದರ್‌ ಜಿಲ್ಲೆ ಹುಮನಾಬಾದ್‌ ತಾಲೂಕಿನ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಆದೇಶವನ್ನು ತಿದ್ದಿದ ಆರೋಪದ ಮೇಲೆ ಸ್ವಾಮೀಜಿ ವಿರುದ್ಧ ಕ್ರಮಕ್ಕೆ ಆದೇಶಿಸಲಾಗಿದೆ.

ನ್ಯಾಯಾಲಯದ ತೀರ್ಪು ತಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಬೀದರ್‌ ಜಿಲ್ಲಾಧಿಕಾರಿ ಗೋವಿಂದ್‌ ರೆಡ್ಡಿ ತಹಸೀಲ್ದಾರ್‌ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಡಾ.ಸಿದ್ಧಲಿಂಗ ಸ್ವಾಮೀಜಿಯೇ ಕೋರ್ಟ್‌ ತೀರ್ಪು ಫೋರ್ಜರಿ ಮಾಡಿದ್ದು, ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ (ಕೆಎಟಿ ) ತೀರ್ಪನ್ನು ತಿದ್ದಿದ್ದ ಪ್ರಕರಣಕ್ಕೆ ಡಾ.ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಹಸೀಲ್ದಾರ್‌ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ದೂರುದಾರ ಚಂದ್ರಕಾಂತ ಜಲಾದಾರ, ಸ್ವಾಮೀಜಿ ನಡುವೆ ಭೂವಿವಾದಕ್ಕೆ ಸಂಬಂಧಿಸಿದಂತೆ 2017ರ ನವೆಂಬರ್ 17ರಂದು ಕೆಎಟಿಯ ಅಧಿಕೃತ ತೀರ್ಪನ್ನು ಬಸವತೀರ್ಥ ಮಠದ ಸ್ವಾಮೀಜಿ ಫೋರ್ಜರಿ ಮಾಡಿ ಸಿಕ್ಕಿಬಿದ್ದಿದ್ದರು. ಇದೀಗ ಕೋರ್ಟ್ ಆದೇಶದಂತೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಹುಮನಾಬಾದ್ ತಹಸೀಲ್ದಾರ್‌ಗೆ ಬೀದರ್ ಡಿಸಿ ಗೋವಿಂದರೆಡ್ಡಿ ಆದೇಶಿಸಿದ್ದಾರೆ.

ಸಿದ್ಧಲಿಂಗ ಸ್ವಾಮಿ ಕೋರ್ಟ್‌ ತೀರ್ಪನ್ನು ಫೋರ್ಜರಿ ಮಾಡಿ ಕಳೆದ ಡಿಸೆಂಬರ್‌ 5, 2017 ರಂದು ಜಿಲ್ಲಾಧಿಕಾಗಳಿಗೆ ಅರ್ಜಿ ಸಲ್ಲಿಸಿದ್ದರು. ಕೆಎಟಿ ಅಧಿಕೃತ ತೀರ್ಪು ತಿದ್ದುಪಡಿ ಮಾಡಿ, ತೀರ್ಪಿನಲ್ಲಿ ಇಲ್ಲದೆ ಇರುವುದನ್ನು ಸೇರಿಸಿರುವುದು ದೃಢಪಟ್ಟಿದ್ದು, ಈ ಕುರಿತು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ಕ್ರಮ ಜರುಗಿಸುವಂತೆ ನಿರ್ದೆಶಿಸಿರುವಂತೆ ಹುಮನಾಬಾದ್‌ನ ಬಸವತೀರ್ಥ ಮಠದ ಗುರು ಚನ್ನಬಸಪ್ಪಯ್ಯ ಮಠಾಧಿಪತಿಗಳಾದ ಡಾ. ಸಿದ್ದಲಿಂಗ ಸ್ವಾಮಿ ವಿರುದ್ಧ ದಂಡ ಸಂಹಿತೆ ಕಲಂ 466 ಅನ್ವಯವಾಗುವಂತೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಕೂಡಲೇ ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

See also  ಸಿಸಿಬಿಯಿಂದ ಚೈತ್ರಾ ಕುಂದಾಪುರ ಆಸ್ತಿ ಜಪ್ತಿ..! ಕೋಟಿ ಮೌಲ್ಯದ ಆಸ್ತಿ ಕಂಡು ಪೊಲೀಸರೇ ಶಾಕ್! ಪೊಲೀಸರಿಗೆ ಸಿಕ್ಕ ದಾಖಲೆಗಳೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget