ಕರಾವಳಿಕ್ರೈಂ

ಮಾಧ್ಯಮಗಳ ಮೇಲೆ ಪೊಲೀಸರು ಹಾಕಿದ್ದ FIRಗೆ ಹೈಕೋರ್ಟ್ ತಡೆ, ಸುಳ್ಯ ಪೊಲೀಸರು ಹಾಕಿದ್ದ ಆ ಕೇಸ್ ಯಾವುದು..?

223

ನ್ಯೂಸ್ ನಾಟೌಟ್: ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪೊಲೀಸರು ದಾಖಲಿಸಿರುವ ಕೇಸಿಗೆ ಮಾಧ್ಯಮ ಪ್ರತಿನಿಧಿಗಳು ಜಾಮೀನು ಪಡೆಯುವ ಮೊದಲೇ ರಾಜ್ಯ ಉಚ್ಛ ನ್ಯಾಯಾಲಯ ನ್ಯಾಯ ಒದಗಿಸಿದೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕ ಕಾನೂನು ಹೋರಾಟ ನಡೆಸಿತ್ತು.

ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಕಾರಿನಲ್ಲಿ ಸುತ್ತಾಟ ನಡೆಸಿದ್ದಾನೆ ಎಂದು ತಿಳಿದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿತ್ತು. ಈ ವೇಳೆ ಹಿಂದೂ ಮುಖಂಡರೊಬ್ಬರು ಪುತ್ತೂರಿನಿಂದ ಸುಳ್ಯಕ್ಕೆ ಓಡೋಡಿ ಬಂದು ಬಿಡಿಸಿದ್ದಾರೆ ಅನ್ನುವ ವರದಿಯನ್ನು ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು.

ಇದಕ್ಕೆ ಸಂಬಂಧ ಪಟ್ಟಂತೆ ಮಾಧ್ಯಮಗಳು ಸುಳ್ಳು ವರದಿಯನ್ನು ಪ್ರಕಟಿಸಿದ್ದಾರೆಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಸುಮೊಟೊ ಕೇಸ್ ದಾಖಲಾಗಿತ್ತು. ಈ ಬಗ್ಗೆ ಕೋರ್ಟ್‌ ನಲ್ಲಿ ಈಗ ಗೆಲುವು ಸಿಕ್ಕಿದಂತಾಗಿದೆ.

See also  10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ..! ಗಂಡು ಮಗುವಿಗೆ ಜನ್ಮ ನೀಡಿ ಬಾಲಕಿ ಸಾವು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget