ಕರಾವಳಿ

ಮಂಗಳೂರು: 627 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು, ಸುಳ್ಯದ ಖಾಸಗಿ ಕಾಲೇಜಿನಲ್ಲಿ ಹೆಚ್ಚು ಸೋಂಕು ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣದಲ್ಲಿ ಏರಿಕೆ ಕಾಣಿಸಿಕೊಳ್ಳುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ ಕಳೆದ ಹದಿನೈದು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 29 ಕಾಲೇಜುಗಳ 627 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.ಈ ಪೈಕಿ 327 ಮಂದಿ ಕೇರಳ ಭಾಗದವರಾಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ , ಸೇರಿದಂತೆ ಹೊರಜಿಲ್ಲೆ ರಾಜ್ಯದ ವಿದ್ಯಾರ್ಥಿಗಳು ಸೇರಿದ್ದಾರೆ. ಜಿಲ್ಲೆಯ ಕಾಲೇಜುಗಳಲ್ಲಿ ಹಾಸ್ಟೆಲ್ ಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಆರೋಗ್ಯ ಇಲಾಖೆ ಈಗಾಗಲೇ ಸೂಚನೆ ನೀಡಿದ್ದು ಇದೀಗ ಪಾಲನೆ ಮಾಡಿದ ಕಾಲೇಜುಗಳಿಗೆ ಎಚ್ಚರಿಕೆ ನೀಡಿ ನೋಟಿಸ್ ನೀಡಲು ನಿರ್ಧರಿಸಿದೆ.

ಸುಳ್ಯದ ಖಾಸಗಿ ಕಾಲೇಜಿನಲ್ಲಿ 77 ಪ್ರಕರಣ

ಸುಳ್ಯದ ಖಾಸಗಿ ಕಾಲೇಜೊಂದರಲ್ಲಿ ಕಳೆದ ಮೂರು ವಾರಗಳಲ್ಲಿ 77 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಾಧಿಸಿದೆ. ಕೇರಳ ಸೇರಿದಂತೆ ಹೊರ ರಾಜ್ಯದ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಲ್ಲಿ ಕೊರೋನಾ ಪ್ರಕರಣ ಕಾಣಿಸಿಕೊಳ್ಳುತ್ತಿದ್ದು ಅವರ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕವನ್ನು ತಪಾಸಣೆ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಕಾಲೇಜುಗಳಿದ್ದು ಹೊರಜಿಲ್ಲೆಯ ರಾಜ್ಯಗಳಿಂದ ಹೆಚ್ಚಿನ ಮಂದಿ ವಿದ್ಯಾರ್ಜನೆಗೆ ಆಗಮಿಸುತ್ತಾರೆ. ಹೀಗೆ ಬರುವಾಗ 72 ಗಂಟೆಗಳ ಆರ್ ಟಿ ಪಿಸಿಆರ್ ನೆಗೆಟಿವ್ ವರದಿ ತರುತ್ತಿದ್ದರೂ ಕೂಡಾ ಇಲ್ಲಿ ಕ್ವಾರಂಟೈನ್ ಆದ ಬಳಿಕ ಅವರಲ್ಲಿ ಕೊವಿಡ್ ಕಾಣಿಸಿಕೊಳ್ಳುತ್ತಿದೆ.

Related posts

ದೇವಚಳ್ಳ ಕ್ರಿಕೆಟ್‌: ಗೆದ್ದ ಹಣ ಶಾಲೆಗೆ ಕೊಟ್ಟು ಮಾದರಿಯಾದ ಮರ್ಕಂಜ ತಂಡ

ಸುಳ್ಯ:ಬಿಳಿಯಾರಿಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಡೆಂಗ್ಯೂ ಬಗ್ಗೆ ರೀಲ್ಸ್ ಮಾಡಿದ್ರೆ 1 ಲಕ್ಷ ರೂಪಾಯಿ ಬಹುಮಾನ..! ಏನಿದು ಹೊಸ ಅಭಿಯಾನ..? ನೀವು ಭಾಗವಹಿಸ್ಬಹುದಾ..?