Latestಕ್ರೈಂವೈರಲ್ ನ್ಯೂಸ್

ಹಂದಿ ಬೇಟೆಗೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ..! ಮನಕಲಕುವ ಘಟನೆ ಕಂಡು ರೈತ ಕಂಗಾಲು..!

765
Pc Cr: Tv9 kannada

ನ್ಯೂಸ್ ನಾಟೌಟ್:  ಹಂದಿ ಬೇಟೆಗೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರವಾಗಿರುವಂತಹ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡಗೆ ಹಸು ಸೇರಿದ್ದು, ಮೇಯಲು ಬಿಟ್ಟಾಗ ಅವಘಡ ಸಂಭವಿಸಿದೆ. ಕಿಡಿಗೇಡಿಗಳಿಂದ ಈ ಕೃತ್ಯದ ಶಂಕೆ ವ್ಯಕ್ತವಾಗಿದೆ.

ಸದ್ಯ ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚನ್ನನಂಜೇಗೌಡ ಕೆಂಪಿಸಿದ್ದನಹುಂಡಿ ಗ್ರಾಮದ ವಾಟರ್ ಟ್ಯಾಂಕ್‌ ಬಳಿ ಜಾನುವಾರು ಮೇಯಲು ಬಿಟ್ಟಿದ್ದರು. ಕಾಡು ಹಂದಿ ಬೇಟೆಗೆ ಅದೇ ಜಾಗದಲ್ಲಿ ಯಾರೋ ಸಿಡಿಮದ್ದು ಅಡಗಿಸಿಟ್ಟಿದ್ದರು. ಹಸು ಮೇಯುತ್ತಿದ್ದ ವೇಳೆ ಸಿಡಿಮದ್ದು ಸ್ಫೋಟಗೊಂಡು ಗಾಯಗೊಂಡಿದೆ.

See also  ದೇವೇಗೌಡರ ಶಾಪವನ್ನು ನೆನಪಿಸಿಕೊಂಡದ್ದೇಕೆ ಸಿಎಂ ಸಿದ್ದರಾಮಯ್ಯ..? ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದ ಸಿಎಂ ಸಿದ್ದು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget